ವಿದೇಶ

ಪಾಕ್ ಹಿಂದೂ ವಿದ್ಯಾರ್ಥಿನಿ ಕೊಲೆಗೂ ಮುನ್ನ ಆಕೆ ಮೇಲೆ ಅತ್ಯಾಚಾರ: ಮರಣೋತ್ತರ ವರದಿ

ಕಳೆದ ಸೆಪ್ಟಂಬರ್ 16ರಂದು ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದ ಪಾಕಿಸ್ತಾನ ಹಿಂದೂ ವೈದ್ಯಕೀಯ ವಿದ್ಯಾರ್ಥಿನಿ ಮೃತ ದೇಹದ ಅಂತಿಮ ಮರಣೋತ್ತರ...

ಪಾಕ್ ಹಿಂದೂ ವಿದ್ಯಾರ್ಥಿನಿ ಕೊಲೆಗೂ ಮುನ್ನ ಆಕೆ ಮೇಲೆ ಅತ್ಯಾಚಾರ: ಮರಣೋತ್ತರ ವರದಿ
ಸಾಂದರ್ಭಿಕ ಚಿತ್ರ
Published On :

ಇಸ್ಲಾಮಾಬಾದ್: ಕಳೆದ ಸೆಪ್ಟಂಬರ್ 16ರಂದು ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದ ಪಾಕಿಸ್ತಾನ ಹಿಂದೂ ವೈದ್ಯಕೀಯ ವಿದ್ಯಾರ್ಥಿನಿ ಮೃತ ದೇಹದ ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿರುವ ಅಂಶ ಪತ್ತೆಯಾಗಿದೆ.

ದಂತ ವೈದ್ಯಕೀಯ ಕಾಲೇಜು( ಬಿಎಡಿಸಿ)ನಲ್ಲಿ ಅಂತಿಮ ವರ್ಷದ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿದ್ದ ಬೀಬಿ ಅಸೀಫಾ ಅವರ ಮೃತ ದೇಹ ಸೆಪ್ಟಂಬರ್ 16 ರಂದು ಲರ್ಕಾನ ದಲ್ಲಿರುವ ಆಕೆಯ ಹಾಸ್ಟೆಲ್ ಕೊಠಡಿಯಲ್ಲಿ ಪತ್ತೆಯಾಗಿತ್ತು.

ಘಟನೆ ನಡೆದ 50 ದಿನಗಳ ನಂತರ ಲರ್ಕಾನದ ಚಾಂದ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಮರಣೋತ್ತರ ವರದಿ ಬಿಡುಗಡೆಮಾಡಿದ್ದು, ಮೃತ ವಿದ್ಯಾರ್ಥಿನಿಯ ದೇಹದಲ್ಲಿ ಪುರುಷನ ವೀರ್ಯ ಕಂಡು ಬಂದಿದ್ದು, ಅತ್ಯಾಚಾರ ನಡೆದಿರುವುದನ್ನು ಸೂಚಿಸುತ್ತದೆ ಎಂದು ವೈದ್ಯಕೀಯ ಕಾನೂನು ಅಧಿಕಾರಿ ಡಾ. ಅಮೃತ ಬುಧವಾರ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.