ವಿದೇಶ

ಬ್ರೆಜಿಲ್ ಅಧ್ಯಕ್ಷ, ಗಣರಾಜ್ಯೋತ್ಸದ ಮುಖ್ಯ ಅತಿಥಿ

ಮುಂದಿನ ವರ್ಷ ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸದ ಮುಖ್ಯ ಅತಿಥಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.

ಬ್ರೆಜಿಲ್ ಅಧ್ಯಕ್ಷ, ಗಣರಾಜ್ಯೋತ್ಸದ ಮುಖ್ಯ ಅತಿಥಿ
ಜೈರ್ ಮೆಸ್ಸಿಯಾಸ್ ಬೋಲ್ಸನಾರೊ - ನರೇಂದ್ರ ಮೋದಿ
Published On :

ಬ್ರೆಸಿಲಿಯಾ: ಮುಂದಿನ ವರ್ಷ ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸದ ಮುಖ್ಯ ಅತಿಥಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.

ಬುಧವಾರ ತಡರಾತ್ರಿ ಬ್ರೆಸಿಲಿಯಾದಲ್ಲಿ ಜರುಗಿದ ದ್ವಿಪಕ್ಷೀಯ ಮಾತುಕತೆಯಲ್ಲಿ ಮೋದಿ ಅವರು ಬೋಲ್ಸನಾರೊಗೆ ಆಹ್ವಾನ ನೀಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬ್ರೆಜಿಲ್ ಅಧ್ಯಕ್ಷರು ಮೋದಿಯವರ ಆಹ್ವಾನವನ್ನುಒಪ್ಪಿದ್ದಾರೆ. ಬೋಲ್ಸೊನಾರೊ ಆಯೋಜಿಸಿರುವ 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಬ್ರೆಸಿಲಿಯಾ ಪ್ರವಾಸದಲ್ಲಿದ್ದಾರೆ.

ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬ್ರೆಜಿಲ್ ಅಧ್ಯಕ್ಷರ ನವದೆಹಲಿ ಭೇಟಿ ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂಬ ವಿಶ್ವಾಸವನ್ನು ಉಭಯ ನಾಯಕರು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.