ಆಸಿಯಾನ್ ರಕ್ಷಣಾ ಸಚಿವರ ಸಭೆ: ಜಪಾನ್, ಅಮೆರಿಕಾ ರಕ್ಷಣಾ ಸಚಿವರುಗಳೊಂದಿಗೆ ರಾಜನಾಥ್ ಸಿಂಗ್ ಮಾತುಕತೆ
ಆಸಿಯಾನ್ ರಕ್ಷಣಾ ಸಚಿವರುಗಳ ಸಭೆಯ ಹೊರಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಜಪಾನ್ ರಕ್ಷಣಾ ಸಚಿವ ಟರೊ ಕೊನೊ ಮತ್ತು ಅಮೆರಿಕಾದ ರಕ್ಷಣಾ ಇಲಾಖೆ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಬ್ಯಾಂಕಾಂಕ್(ಥೈಲ್ಯಾಂಡ್): ಆಸಿಯಾನ್ ರಕ್ಷಣಾ ಸಚಿವರುಗಳ ಸಭೆಯ ಹೊರಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಜಪಾನ್ ರಕ್ಷಣಾ ಸಚಿವ ಟರೊ ಕೊನೊ ಮತ್ತು ಅಮೆರಿಕಾದ ರಕ್ಷಣಾ ಇಲಾಖೆ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಜಪಾನ್ ರಕ್ಷಣಾ ಸಚಿವರ ಜೊತೆ ನಡೆಸಿದ ಮಾತುಕತೆಯಲ್ಲಿ ರಕ್ಷಣಾ ಸಹಕಾರದಲ್ಲಿ ಹೆಚ್ಚಿನ ಕೆಲಸ ಮಾಡುವುದಾಗಿ ಚರ್ಚೆ ನಡೆಸಿದೆವು ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಆಸಿಯಾನ್ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಮತ್ತು ಇತರ 8 ದೇಶಗಳ ಸಚಿವರುಗಳು ಭಾಗವಹಿಸಿದ್ದು ದೇಶಗಳ ನಡುವೆ ರಕ್ಷಣಾ ಸಹಕಾರಗಳ ಕುರಿತು ಮಾತುಕತೆ ನಡೆಸಿದರು.
ಇದಕ್ಕೂ ಮುನ್ನ ರಾಜನಾಥ್ ಸಿಂಗ್ ಅಮೆರಿಕಾ ರಕ್ಷಣಾ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ್ದು ಅದು ಫಲಪ್ರದಾಯಕವಾಗಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


