ಶ್ರೀಲಂಕಾ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದ ಗೊಟಬಯ ರಾಜಪಕ್ಸ
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಲಂಕಾದ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಟಬಯ ರಾಜಪಕ್ಸ ಗೆಲುವು ಸಾಧಿಸಿದ್ದಾರೆ.

ಕೊಲಂಬೊ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಲಂಕಾದ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಟಬಯ ರಾಜಪಕ್ಸ ಗೆಲುವು ಸಾಧಿಸಿದ್ದಾರೆ.
ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಗೊಟಬಯ ರಾಜಪಕ್ಸ ಶೇಕಡ 48.2ರಷ್ಟು ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಇನ್ನೆರೆಡು ದಿನಗಳಲ್ಲಿ ಅಧ್ಯಕ್ಷರಾಗಿ ರಾಜಪಕ್ಸ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಗೊಟಬಯ ಅವರ ವಕ್ತಾರ ಕೆಹೆಲಿಯಾ ರಂಬುಕ್ ವೆಲ್ಲಾ ಹೇಳಿದ್ದಾರೆ.
ಅಧ್ಯಕ್ಷ ಚುನಾವಣೆಯಲ್ಲಿ ಗೊಟಬಯ ವಿರುದ್ಧ ವಸತಿ ಸಚಿವ ಪ್ರೇಮದಾಸ ಶೇಕಡ 45.3ರಷ್ಟು ಮತ ಗಳಿಸಿದ್ದಾರೆ. ನವೆಂಬರ್ 16ರಂದು ಚುನಾವಣೆ ನಡೆದಿದ್ದು 15.99 ದಶಲಕ್ಷ ಮತದಾರರ ಪೈಕಿ ಶೇ. 80ರಷ್ಟು ಮತದಾರರು ಮತ ಚಲಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


