ವಿದೇಶ

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶ ತಿರಸ್ಕರಿಸಿ: ವಿಶ್ವಸಂಸ್ಥೆಗೆ ಪಾಕ್ ಪತ್ರ

ಕಾಶ್ಮೀರದಲ್ಲಿ ಮತ್ತೆ ಮೂಗು ತೂರಿಸಿರುವ ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರವೊಂದನ್ನು ಬರೆದಿದ್ದು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ.

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶ ತಿರಸ್ಕರಿಸಿ: ವಿಶ್ವಸಂಸ್ಥೆಗೆ ಪಾಕ್ ಪತ್ರ
ಸಂಗ್ರಹ ಚಿತ್ರd
Published On :

ನವದೆಹಲಿ: ಕಾಶ್ಮೀರದಲ್ಲಿ ಮತ್ತೆ ಮೂಗು ತೂರಿಸಿರುವ ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರವೊಂದನ್ನು ಬರೆದಿದ್ದು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದತಿ ಕುರಿತಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಷಿ ಪತ್ರ ಬರೆದಿದ್ದಾರೆ. 

ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರ್ರೆಸ್'ಗೆ ಬರೆದಿರುವ ಖುರೇಷಿ, 370ನೇ ವಿಧಿ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಯಾವುದೇ ದೇಶ ಮಧ್ಯ ಪ್ರವೇಶಿಸಬಾರದು ಎಂದು ಭಾರತ ಬಹಳ ಹಿಂದಿನಿಂದಲೂ ಹೇಳುತ್ತಲೇ ಬರುತ್ತಿದೆ. ಆದರೂ, ಈ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಲೇ ಇದೆ. ಜಮ್ಮು ಮತ್ತು ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆ ಮೊದಲಾದ ಅಂತರಾಷ್ಟ್ರೀಯ ವೇದಿಕೆಯ ಮುಂದೆ ತರಲು ಪಾಕಿಸ್ತಾನ ಮೊದಲಿನಿಂದಲೂ ಪ್ರಯತ್ನಿಸುತ್ತಲೇ ಇದೆ. ಆದರೆ, ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರಿವನ್ನ ಭಾರತ ಸರ್ಕಾರ ರದ್ದುಗೊಳಿಸಿದ ಬಳಿಕ ಪಾಕಿಸ್ತಾನದ ಕೋಪ ಮತ್ತಷ್ಟು ಹೆಚ್ಚಾಗುವಂತಾಗಿದೆ. 
 
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಈ ವಿಚಾರ ಚರ್ಚೆಯಾಗಬೇಕೆಂದು ಪಾಕಿಸ್ತಾನ ಮನವಿ ಕೂಡ ಮಾಡಿಕೊಂಡಿದ್ದು, ಅದಕ್ಕಾಗಿ ಚೀನಾದ ಮೂಲಕ ಲಾಭಿಯನ್ನೂ ನಡೆಸಿದೆ. ಚೀನಾದ ಪ್ರಯತ್ನದಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೊನೆಗೂ ಕ್ಲೋಸ್ಡ್ ಡೋರ್ ಕನ್ಸಲ್ಟೇಷನ್ಸ್ ಸಭೆಯೂ ನಡೆದಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.