ಕಾಂಗೋ ವಿಮಾನ ಪತನ: 23 ಮೃತದೇಹಗಳ ಪತ್ತೆ
ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಪೂರ್ವ (ಡಿಸಿಆರ್ ) ಪೂರ್ವ ನಗರವಾದ ಗೋಮದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ

ಗೋಮ: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಪೂರ್ವ (ಡಿಸಿಆರ್ ) ಪೂರ್ವ ನಗರವಾದ ಗೋಮದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸ್ಥಳೀಯ ಬ್ಯುಸಿ ಬೀ ಎಂಬ ಕಂಪನಿಗೆ ಸೇರಿದ್ದ ಈ ವಿಮಾನದಲ್ಲಿ 17 ಪ್ರಯಾಣಿಕರು ಮತ್ತು ಇತರ ಸಿಬ್ಬಂದಿ, ಬೆನಿ ನಗರಕ್ಕೆ ತೆರಳುವಾಗ ಅಪಘಾತಕ್ಕೀಡಾಗಿದೆ ಎಂದು ಪೂರ್ವ ಡಿಆರ್ ಕಾಂಗೋದ ಉತ್ತರ ಕಿವು ಗರ್ವನರ್ ತಿಳಿಸಿದ್ದಾರೆ.
ಈಗ 23 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಗೋಮಾ ರಕ್ಷಣಾ ಸೇವೆಯ ಸಮನ್ವಯಾಧಿಕಾರಿ ಜೋಸೆಫ್ ಮಾಕುಂದಿ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಉತ್ತರ ಗೋಮದ ಬಳಿ 350 ಕಿಲೋ ಮೀಟರ್ ಎತ್ತರ ಪ್ರದೇಶದಲ್ಲಿ ಡಾರ್ನಿಯರ್ -228 ವಿಮಾನ, ಸಿಟಿ ಆಫ್ ಬೆನಿ ವಿಮಾನಕ್ಕೆ ಡಿಕ್ಕಿ ಹೊಡೆದಿದ್ದು, ಧಗಧಗನೆ ಹೊತ್ತಿ ಉರಿದಿವೆ ಎಂದು ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡವರ ಬಗ್ಗೆ ನಿರ್ದಿಷ್ಠ ಮಾಹಿತಿ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


