ಇರಾಕ್ ನಲ್ಲಿ ಹಿಂಸಾರೂಪಕ್ಕೆ ತಿರುಗಿದ ನಾಗರಿಕ ಪ್ರತಿಭಟನೆ, ಸಾವಿನ ಸಂಖ್ಯೆ 25ಕ್ಕೆ ಏರಿಕೆ!
ಉತ್ತರ ಇರಾಕ್ ನಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಇರಾಕ್ ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಬಾಗ್ದಾದ್: ಉತ್ತರ ಇರಾಕ್ ನಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಇರಾಕ್ ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ನಿರುದ್ಯೋಗ, ಆಂತರಿಕ ಕಲಹ, ಭಯೋತ್ಪಾದನೆ, ಸಾಮಾಜಿಕ ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೆಲ ಸಂಘಟನೆಗಳು ಪ್ರತಿಭಟನೆಗೆ ಕರೆಕೊಟ್ಟಿದ್ದವು. ಆದರೆ ಸೈನಿಕರ ಮಧ್ಯ ಪ್ರವೇಶದೊಂದಿಗೆ ಇದೀಗ ಪ್ರತಿಭಟನೆ ಇದೀಗ ಹಿಂಸಾರೂಪಕ್ಕೆ ತಿರುಗಿದ್ದು, ಉತ್ತರ ಇರಾಕ್ ಇದೀಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ.
ಸೈನಿಕರು ಮತ್ತು ಪ್ರತಿಭಟನಾ ನಿರತರ ನಡುವಿನ ಕಾಳಗದಲ್ಲಿ ಈ ವರೆಗೂ ಸುಮಾರು 25 ಮಂದಿ ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರನ್ನು ತಡೆಯುವ ನಿಟ್ಟಿನಲ್ಲಿ ಸೈನಿಕರು ಸಿಡಿಸಿದ್ದ ಅಶ್ರುವಾಯು ಪ್ರಯೋಗ, ತುರ್ತು ಪ್ರಹಾರದಳಗಳ ಕಾರ್ಯಾಚರಣೆಗೆ ಮಣಿಯದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಹೀಗಾಗಿ ಉತ್ತರ ಇರಾಕ್ ಗೆ ಮತ್ತಷ್ಟು ಸೇನೆಯನ್ನು ಕಳುಹಿಸಿ ಅಲ್ಲಿ ಶಾಂತಿ ಕಾಪಾಡಲು ಪ್ರಯತ್ನಿಸುವುದಾಗಿ ಇರಾಕ್ ಸರ್ಕಾರ ಹೇಳಿದೆ.
ಇನ್ನು ಪ್ರತಿಭಟನೆಯನ್ನು ನಿಯಂತ್ರಿಸುವಲ್ಲಿ ಇರಾಕ್ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಜಮಿಲ್ ಅಲ್ ಶಮ್ಮಾರಿ ವಿಫಲವಾಗಿರುವ ಹಿನ್ನಲೆಯಲ್ಲಿ ಇರಾಕ್ ಪ್ರಧಾನಿ ಅಡೆಲ್ ಅಬ್ದುಲ್ ಮೆಹ್ದಿ ಅವರನ್ನು ಅವರನ್ನು ಸೇನಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ.
ಇದೇ ರೀತಿ ಈ ಹಿಂದೆ ಅಂದರೆ ಕಳೆದ ಅಕ್ಟೋಬರ್ ನಲ್ಲಿ ನಡೆದಿದ್ದ ಇದೇ ರೀತಿಯ ಪ್ರತಿಭಟನೆಯಲ್ಲಿ ಸುಮಾರು 350 ಮಂದಿ ನಾಗರಿಕರು ಸಾವನ್ನಪ್ಪಿ 15 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


