ಮೋದಿ ಸರ್ಕಾರ ಈಶಾನ್ಯ ಭಾರತದಲ್ಲಿ ಅಭಿವೃದ್ಧಿ ಕೆಲಸ ಮಾಡಿದೆ: ಜೈಶಂಕರ್
ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದ ಸನ್ನಿವೇಶಗಳ ನಡುವೆ ಹೋಲಿಕೆ ಮಾಡಲು ಪ್ರಯತ್ನಿಸುತ್ತಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಅವರು, ಈಶಾನ್ಯ ಭಾರತ ಇಂದು "ಬಹುಮಟ್ಟಿಗೆ....

ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದ ಸನ್ನಿವೇಶಗಳ ನಡುವೆ ಹೋಲಿಕೆ ಮಾಡಲು ಪ್ರಯತ್ನಿಸುತ್ತಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಅವರು, ಈಶಾನ್ಯ ಭಾರತ ಇಂದು "ಬಹುಮಟ್ಟಿಗೆ ಶಾಂತಿಯುತವಾಗಿದೆ". ಅದಕ್ಕೆ ಕಾರಣ ಅಭಿವೃದ್ಧಿ. ಹಾಗೆಯೇ ಕಾಶ್ಮೀರ ಕೂಡ ಮುಂದೊಂದು ದಿನ ಶಾಂತಿಯುತವಾಗಲಿದೆ ಎಂದು ಬುಧವಾರ ಹೇಳಿದ್ದಾರೆ.
"ಈಶಾನ್ಯ ಪ್ರದೇಶದಲ್ಲೂ, ಭಾರತವು ತುಂಬಾ ಕಷ್ಟಕರವಾದ ಪರಿಸ್ಥಿತಿಯನ್ನು ನಿಭಾಯಿಸಿದೆ. ಇಂದು ನೀವು ಈಶಾನ್ಯವನ್ನು ನೋಡಿದರೆ ಅದು ಬಹುಮಟ್ಟಿಗೆ ಶಾಂತಿಯುತವಾಗಿದೆ" ಎಂದು ಡಾ. ಜೈಶಂಕರ್ ಅವರು ಅಮೆರಿಕದ ಹೆಸರಾಂತ ಕೇಂದ್ರದ ಸ್ಟ್ರಾಟೆಜಿಕ್ ಮತ್ತು ಇಂಟರ್ನ್ಯಾಷನಲ್ ಸ್ಟಡೀಸ್ ಭಾಷಣದ ನಂತರ ಪ್ರಶ್ನೆಗಳಿಗೆ ಉತ್ತರಿಸಿದರು.
ಈಶಾನ್ಯ ಪ್ರದೇಶದ ಜನರು 'ಲಾಭದಾಯಕ ಜೀವನೋಪಾಯ'ದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರು "ಭದ್ರತಾ ಪಡೆಗಳ ಮೇಲೆ ಕಲ್ಲು ಎಸೆಯುವುದಿಲ್ಲ" ಎಂದು ಅವರು ಹೇಳಿದರು.
"ಅಭಿವೃದ್ಧಿ ವಾಸ್ತವವಾಗಿ ಈಶಾನ್ಯದಲ್ಲಿ ಕೆಲಸ ಮಾಡಿದೆ. ರಾಷ್ಟ್ರೀಯ ಪಕ್ಷಗಳು ಇಂದು ಸಾಕಷ್ಟು ಬೆಂಬಲವನ್ನು ಹೊಂದಿರುವುದರಿಂದ ರಾಜಕೀಯ ಮುಖ್ಯವಾಹಿನಿಯಲ್ಲೂ ಇದು ಬಹಳ ಬಲವಾಗಿ ಕೆಲಸ ಮಾಡಿದೆ" ಎಂದರು.
"ನಾವು (ಭಾರತ ಸರ್ಕಾರ) ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಮಾಡಲು ಯತ್ನಿಸುತ್ತಿದ್ದೇವೆ. ಇದು ಸಾಧ್ಯವಾದರೆ ಕಳೆದ 70 ವರ್ಷಗಳಲ್ಲಿ ಪಾಕಿಸ್ತಾನಿಗಳು ಯೋಜಿಸಿರುವ ಎಲ್ಲ ತಂತ್ರಗಳು ವ್ಯರ್ಥವಾಗಲಿವೆ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಜೈಶಂಕರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


