ವಿದೇಶ

ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 10 ಸಾವು

ಆಫ್ಘಾನಿಸ್ತಾನದಲ್ಲಿ ಮತ್ತೊಂದು ಭೀಕರ ಆತ್ಮಹತ್ಯಾ ದಾಳಿ ನಡೆದಿದ್ದು, ಘಟನೆಯಲ್ಲಿ ಮಕ್ಕಳೂ ಸೇರಿದಂತೆ ಕನಿಷ್ಛ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 10 ಸಾವು
ಸಂಗ್ರಹ ಚಿತ್ರ
Published On :

ಕಾಬೂಲ್: ಆಫ್ಘಾನಿಸ್ತಾನದಲ್ಲಿ ಮತ್ತೊಂದು ಭೀಕರ ಆತ್ಮಹತ್ಯಾ ದಾಳಿ ನಡೆದಿದ್ದು, ಘಟನೆಯಲ್ಲಿ ಮಕ್ಕಳೂ ಸೇರಿದಂತೆ ಕನಿಷ್ಛ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಫ್ಘನ್ ಸೇನಾಕ್ಯಾಂಪ್ ಅನ್ನು ಗುರಿಯಾಗಿಸಿಕೊಂಡು ಉಗ್ರರು ಈ ದಾಳಿ ನಡೆಸಿರುವ ಶಂಕೆ ಇದ್ದು, ಅಫ್ಘಾನಿಸ್ತಾನದ ಭದ್ರತಾ ಪಡೆಗೆ ಜಲಾಲಾಬಾದ್‌ನಲ್ಲಿ ನೇಮಕಾತಿ ನಡೆಯುತ್ತಿದ್ದ ಸಮಯದಲ್ಲಿ ಮಿನಿಬಸ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ಪಡೆಗೆ ನೇಮಕಾತಿಗೊಂಡವರು ಕಾಬೂಲ್‌ಗೆ ಮಿನಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಜರುಗಿದೆ ಎಂದು ನಂಗರ್‌ಹಾರ್ ಪ್ರಾಂತೀಯ ಮಂಡಳಿಯ ಸದಸ್ಯ ಸೊಹ್ರಾಬ್ ಖಾದೇರಿ ತಿಳಿಸಿದ್ದಾರೆ. ಸರಕು ಸಾಗಿಸಲು ಬಳಕೆ ಮಾಡುವ ಪುಟ್ಟ ವಾಹನದಲ್ಲಿ ಬಾಂಬ್ ಇಡಲಾಗಿತ್ತು ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.