'ಫತ್ಫ್' ಮುಜುಗರ ತಪ್ಪಿಸಿಕೊಳ್ಳಲು ಜೆಯುಡಿ, ಲಷ್ಕರ್ ಉಗ್ರರ ಬಂಧಿಸಿದ ಪಾಕಿಸ್ತಾನ!
ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (FATF) ಸಾಮಾನ್ಯಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಲಷ್ಕರ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಪ್ರಮುಖ ಉಗ್ರರನ್ನು ಬಂಧಿಸಿದೆ.

ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (FATF) ಸಾಮಾನ್ಯಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಲಷ್ಕರ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಪ್ರಮುಖ ಉಗ್ರರನ್ನು ಬಂಧಿಸಿದೆ.
ಮೂಲಗಳ ಪ್ರಕಾರ ಉಗ್ರವಾದಕ್ಕೆ ಆರ್ಥಿಕ ನೆರವು ನೀಡಿದ ಆರೋಪದಡಿ ನಿಷೇಧಿತ ಸಂಘಟನೆಗಳ ನಾಲ್ವರು ಉಗ್ರ ನಾಯಕರನ್ನು ಪಾಕಿಸ್ತಾನದ ಲಾ ಎನ್ಪೋರ್ಸ್ಮೆಂಟ್ ಏಜೆನ್ಸಿಗಳು ಗುರುವಾರ ಬಂಧಿಸಿವೆ. ನಿಷೇಧಿತ ಎಲ್ಇಟಿ ಅಥವಾ ಜೆಯುಡಿ ಸಂಘಟನೆಗೆ ಹಣಕಾಸಿನ ನೆರವು ನೀಡಿದ ಪ್ರೊ. ಜಾಫರ್ ಇಬ್ಕಾಲ್, ಯಹ್ಯಾ ಅಜೀಜ್, ಮೊಹಮ್ಮದ್ ಅಶ್ರಫ್ ಹಾಗೂ ಅಬ್ದುಲ್ ಸಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಇದೇ ಅಕ್ಟೋಬರ್ 12ರಿಂದ 15ರವೆರೆಗೆ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್)ನ ಸಭೆ ನಡೆಯುತ್ತಿರುವ ಹಿನ್ನೆಲೆ ಇಂತಹದೊಂದು ಕ್ರಮಕ್ಕೆ ಪಾಕಿಸ್ತಾನ ಮುಂದಾಗಿದೆ ಎನ್ನಲಾಗಿದೆ. ಈ ಹಿಂದೆ ಉಗ್ರವಾದವನ್ನು ಹತ್ತಿಕ್ಕುವ ಸಂಬಂಧ ಫತ್ಫ್ ವಿಧಿಸಿದ್ದ ನಿಮಯಗಳನ್ನು ಪಾಲಿಸದೆ ಪಾಕಿಸ್ತಾನ ಈ ಉಗ್ರರನ್ನು ಗ್ರೇ ಪಟ್ಟಿ ಸೇರಿಸಿತ್ತು. 2019ರ ಅಕ್ಟೋಬರೊಳಗೆ ಪಾಕ್ ಎಚ್ಚೆತ್ತುಕೊಳ್ಳದಿದ್ದರೆ ಕಪ್ಪುಪಟ್ಟಿಗೆ ಸೇರಿಸುವುದಾಗಿ ಸಹ ಎಚ್ಚರಿಕೆ ನೀಡಿತ್ತು. ಇದರಿಂದ ಆತಂಕಕ್ಕೆ ಒಳಗಾಗಿದ್ದ ಪಾಕ್ ಕೆಲವು ಉಗ್ರ ನಾಯಕರನ್ನು ಬಂಧಿಸಿದೆ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ಉಗ್ರ ನಿಗ್ರಹ ದಳದ ಅಧಿಕಾರಿಗಳು, ಉಗ್ರ ನಿಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕ್ರಿಯಾ ಯೋಜನೆಯಡಿಯಲ್ಲಿನ ನಿರ್ಧಾರಗಳನ್ನು ಪರಿಣಾಮಕಾರಿಯಾಗಿ ಜಾರಿಮಾಡಲಾಗುತ್ತಿದೆ. ಜೆಯುಡಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯ್ಯೀದ್ ನನ್ನು ಈಗಾಗಲೇ ಗೃಹ ಬಂಧನದಲ್ಲಿರಿಸಲಾಗಿದೆ. ಈ ಪ್ರಕರಣ ಕೂಡ ವಿಚಾರಣೆಯಲ್ಲಿದೆ. ಇನ್ನೂ ಸಾಕಷ್ಟು ಕ್ರಮಗಳನ್ನು ಪಾಕಿಸ್ತಾನ ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


