ಸೌದಿಯಲ್ಲಿ ಭೀಕರ ಬಸ್ ಅಪಘಾತ: 35 ವಿದೇಶಿಗರ ಸಾವು
ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 35 ಮಂದಿ ವಿದೇಶಿಗರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಿಯಾದ್: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 35 ಮಂದಿ ವಿದೇಶಿಗರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪಶ್ಚಿಮ ಸೌದಿ ಅರೇಬಿಯಾದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 35 ಜನರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ. ಮುಸ್ಲಿಮರ ಪವಿತ್ರ ನಗರ ಮದೀನಾದಲ್ಲಿ ಈ ದುರಂತ ಸಂಭವಿಸಿದ್ದು, ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಬಸ್ ನಲ್ಲಿ ಅರಬ್ ಸೇರಿದಂತೆ ಏಷ್ಯಾದ ಹಲವು ಯಾತ್ರಾರ್ಥಿಗಳು ಇದ್ದರು ಎನ್ನಲಾಗಿದೆ. ಆದರೆ ಅವರ ಗುರುತು ಪತ್ತೆ ಇನ್ನಷ್ಟೇ ಆಗಬೇಕಿದೆ.
ಇನ್ನು ಗಾಯಾಳುಗಳನ್ನು ಇಲ್ಲಿನ ಅಲ್ ಹಮ್ಮಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯ ಭದ್ರತಾ ಸಿಬ್ಬಂದಿ ತನಿಖೆ ನಡೆಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಪಶ್ಚಿಮ ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ೩೫ ಜನರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಬಸ್ ಅಪಘಾತದ ಸುದ್ದಿಯಿಂದ ಆಘಾತವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪವಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಗುರುವಾರ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


