ವಿಮಾನದಲ್ಲಿ ಸೆಕ್ಸ್: ಮಹಿಳಾ ಸಿಬ್ಬಂದಿಯಿಂದ ವಿಡಿಯೋ ಸೆರೆ!
ಕಾಮಾತುರಾಣಾಂ ನ ಭಯಂ ನ ಲಜ್ಜಾ ಎಂಬ ಮಾತಿದೆ. ಅದರಂತೆಯೇ ವಿಮಾನದಲ್ಲಿ ಪ್ರಯಾಣಿಕರ ನಡುವೆಯೇ ಜೋಡಿಯೊಂದು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದನ್ನು ನೋಡಿದ ಮಹಿಳಾ ಸಿಬ್ಬಂದಿಗಳು ಅವರನ್ನು ತಡೆದಿದ್ದಾರೆ.

ಮಾಸ್ಕೋ: ಕಾಮಾತುರಾಣಾಂ ನ ಭಯಂ ನ ಲಜ್ಜಾ ಎಂಬ ಮಾತಿದೆ. ಅದರಂತೆಯೇ ವಿಮಾನದಲ್ಲಿ ಪ್ರಯಾಣಿಕರ ನಡುವೆಯೇ ಜೋಡಿಯೊಂದು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದನ್ನು ನೋಡಿದ ಮಹಿಳಾ ಸಿಬ್ಬಂದಿಗಳು ಅವರನ್ನು ತಡೆದಿದ್ದಾರೆ.
ಮಾಸ್ಕೋ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದವರು ವಿಮಾನ ನಿಲ್ದಾಣದಲ್ಲಷ್ಟೇ ಭೇಟಿಯಾಗಿದ್ದರು ಎಂಬುದು ಮತ್ತೊಂದು ಅಘಾತಕಾರಿ ಮಾಹಿತಿಯಾಗಿದೆ.
ವಿಮಾನದಲ್ಲಿ ಪಕ್ಕದಲ್ಲೇ ಕುಳಿತ 40 ರ ಆಸುಪಾಸಿನ ಪುರುಷ-ಮಹಿಳೆ ಇಬ್ಬರೂ ಅಸಭ್ಯವಾಗಿ ನಡೆದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಮಹಿಳಾ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ವಿಮಾನ ಸಿಬ್ಬಂದಿಗಳು ನೀಡಿರುವ ಮಾಹಿತಿಯ ಪ್ರಕಾರ ಇಬ್ಬರೂ ಪಾನಮತ್ತರಾಗಿ ಸೆಕ್ಸ್ ಮಾಡುತ್ತಿದ್ದರು.
ತಕ್ಷಣವೇ ಇಬ್ಬರನ್ನೂ ತಡೆದ ಸಿಬ್ಬಂದಿಗಳು, ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಮಾಡುವುದು ತಪ್ಪು ಎಂದು ಹೇಳಿದ್ದು, ದೂರು ನೀಡುವುದಾಗಿ ಎಚ್ಚರಿಸಿದ್ದಾರೆ. ಆದರೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ವಿಮಾನ ಸಿಬ್ಬಂದಿಯನ್ನೇ ಪ್ರಶ್ನಿಸಿದ್ದಾನೆ ಎಂದು ತಿಳಿದುಬಂದಿದೆ. ವ್ಯಕ್ತಿ ವ್ಲಾಡಿವೋಸ್ಟಾಕ್ ನಿವಾಸಿಯಾಗಿದ್ದು, ಮಹಿಳೆ ನಖೋಡ್ಕಾದವರು ಎಂದು ತಿಳಿದುಬಂದಿದೆ. ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


