'ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ಥಾನ್ ಹಮಾರ...' ಭಾರತವನ್ನು ಹೊಗಳಿ ಹಾಡಿದ ಪಾಕಿಸ್ತಾನ ನಾಯಕ!
ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ಪಾಕ್ ನ ಎಲ್ಲಾ ರಾಜಕಾರಣಿಗಳೂ ವಿರೋಧಿಸುತ್ತಿದ್ದಾರೆ. ಆದರೆ ಪಾಕಿಸ್ತಾನದ ಎಂಕ್ಯುಎಂ ನ ನಾಯಕ ಅಲ್ತಾಫ್ ಹುಸೇನ್ ಮಾತ್ರ ಭಾರತದ ಪರ ನಿಂತಿದ್ದಾರೆ.

ಇಸ್ಲಾಮಾಬಾದ್: ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ಪಾಕಿಸ್ತಾನದ ಪ್ರಧಾನಿಯಾದಿಯಾಗಿ ಎಲ್ಲಾ ರಾಜಕಾರಣಿಗಳೂ ವಿರೋಧಿಸುತ್ತಿದ್ದಾರೆ. ಆದರೆ ಪಾಕಿಸ್ತಾನದ ಎಂಕ್ಯುಎಂ ನ ನಾಯಕ ಅಲ್ತಾಫ್ ಹುಸೇನ್ ಮಾತ್ರ ಭಾರತದ ಪರ ನಿಂತಿದ್ದಾರೆ.
ಬೆಂಬಲಿಗರನ್ನುದ್ದೇಶಿಸಿ ಮಾತನಾಡಿರುವ ಪಾಕಿಸ್ತಾನದ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್ (ಎಂಕ್ಯುಎಂ) ಸ್ಥಾಪಕ ಅಲ್ತಾಫ್ ಹುಸೇನ್, ಆರ್ಟಿಕಲ್ 370 ರದ್ದತಿ ಭಾರತದ ಆಂತರಿಕ ವಿಷಯ, ಇದರಲ್ಲಿ ಪಾಕಿಸ್ತಾನ ಮಧ್ಯಪ್ರವೇಶಿಸಬಾರದು ಎಂದು ಹೇಳಿದ್ದು, ಸಾರೇ ಜಹಾನ್ ಸೇ ಅಚ್ಚಾ ಹಾಡನ್ನು ಹೆಮ್ಮೆಯಿಂದ ಹಾಡಿದ್ದಾರೆ.
ಭಾರತ ಸರ್ಕಾರ ಆರ್ಟಿಕಲ್ 370 ರದ್ದುಗೊಳಿಸಿರುವುದು ಭಾರತದ ಆಂತರಿಕ ವಿಷಯ, ಭಾರತೀಯರ ಬೆಂಬಲ ಪಡೆದೇ ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹುಸೇನ್ ಹೇಳಿದ್ದಾರೆ.
ಇದೇ ವೇಳೆ ಪಾಕಿಸ್ತಾನದ ಸರ್ಕಾರ ಹಾಗೂ ಸೇನೆ ವಿರುದ್ಧ ನೇರ ವಾಗ್ದಾಳಿ ನಡೆಸಿರುವ ಹುಸೇನ್, ಸರ್ಕಾರ ಹಾಗೂ ಸೇನೆ ಎರಡೂ 72 ವರ್ಷಗಳಿಂದ ಪಾಕಿಸ್ತಾನಿಯರನ್ನು ಕಾಶ್ಮೀರದ ವಿಷಯದಲ್ಲಿ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


