ಆರೋಪ ಒಪ್ಪಿಕೊಳ್ಳುವಂತೆ ಕುಲಭೂಷಣ್ ಜಾಧವ್‌ಗೆ ಪಾಕ್‌ನಿಂದ ಒತ್ತಡ: ಭೇಟಿ ಬಳಿಕ ಭಾರತ ಆಕ್ರೋಶ
ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಕುಲಭೂಷಣ್ ಜಾದವ್ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಕುಲಭೂಷಣ್ ಜಾದವ್ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ.
ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ನಿವೃತ್ತ ನೌಕಾ ಅಧಿಕಾರಿ ಕುಲಭೂಷಣ್ ಜಾಧವ್ ರನ್ನು ಭಾರತೀಯ ರಾಯಭಾರಿ ಗೌರವ್ ಅಹ್ಲುವಾಲಿಯಾ ನಿನ್ನೆ ಭೇಟಿ ಮಾಡಿದ್ದರು. ಭೇಟಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲಭೂಷಣ್ ಜಾದವ್ ಮೇಲೆ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದೆ. ಅಲ್ಲದೆ ಅವರು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ತೀವ್ರ ಒತ್ತಡ ಹೇರುತ್ತಿದೆ. ಈ ಹಿಂದೆ ಕುಲಭೂಷಣ್ ಜಾದವ್ ನೀಡಿದ್ದ ಹೇಳಿಕೆ ಕೂಡ ಪಾಕಿಸ್ತಾನದ ನಿರ್ದೇಶನದಂತೆ ಬಂದ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.
'ಕುಲಭೂಷಣ್ ಜಾಧವ್ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ. ಜಾಧವ್ ರಿಂದ ಪಾಕಿಸ್ತಾನ ಗಿಳಿಪಾಠ ಹೇಳಿಸಿದ್ದು, ಇದರಿಂದಾಗಿ ಅವರು ಬಹಳ ಒತ್ತಡದಲ್ಲಿ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪಾಕಿಸ್ತಾನ ಜಾಧವ್ ಭೇಟಿಗೆ ಅವಕಾಶ ನೀಡಿತ್ತು. ಈ ವೇಳೆ ಪಾಕಿಸ್ತಾನ ಇಲ್ಲ ಸಲ್ಲದ ಆರೋಪಗಳನ್ನು ಗಿಳಿ ಪಾಠದಂತೆ ಒಪ್ಪಿಸಲು ಜಾಧವ್ ಮೇಲೆ ತೀವ್ರ ಒತ್ತಡವನ್ನು ಹೇರಿದೆ. ನಾವು ಸಮಗ್ರ ವರದಿಗಾಗಿ ಕಾಯುತ್ತಿದ್ದೇವೆ ಅಂತಾ ವಿದೇಶಾಂಗ ಇಲಾಖೆ ತಿಳಿಸಿದೆ. ಅಲ್ಲದೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಾಧವ್ ತಾಯಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ.
ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಕುಲಭೂಷಣ್ ಜಾಧವ್ ರನ್ನು ಪಾಕಿಸ್ತಾನ ಬಂಧಿಸಿತ್ತು. ಅಲ್ಲದೇ ಅಲ್ಲಿನ ಮಿಲಿಟರಿ ನ್ಯಾಯಾಲಯ ಅವರಿಗೆ ಮರಣ ದಂಡನೆ ಶಿಕ್ಷೆ ಕೂಡ ವಿಧಿಸಿತ್ತು. ಬಳಿಕ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿ ಮರಣದಂಡನೆಗೆ ತಡೆಯಾಜ್ಞೆ ನೀಡುವಂತೆ ಮಾಡಿತ್ತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


