ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದಿಂದ ಸುಳ್ಳಿನ ಆರೋಪ-ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು
ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ ಕಪೋಲ ಕಲ್ಪಿತ ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ.

ಜಿನಿವಾ: ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ ಕಪೋಲ ಕಲ್ಪಿತ ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ 42ನೇ ಅಧಿವೇಶವನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಠಾಕೂರ್ ಸಿಂಗ್, ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿನ ತಾರತಮ್ಯ ತೊಡೆದುಹಾಕಲು ಸಂವಿಧಾನದ ಕಲಂ 370ನೇ ವಿಧಿಯನ್ನು ರದ್ದುಗೊಳಿಸಿರುವುದು ಸಂಸತ್ತಿನ ನಿರ್ಧಾರವಾಗಿದೆ ಎಂದರು.
ಕಲಂ 370ನೇ ವಿಧಿ ರದ್ದತಿ ಭಾರತೀಯ ಸಂವಿಧಾನದ ಚೌಕಟ್ಟಿನೊಳಗೆ ಕೈಗೊಂಡ ನಿರ್ಧಾರವಾಗಿದೆ ಎಂದು ವಿಜಯ್ ಠಾಕೂರ್ ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಶಿ, ಮೂಲ ಸೌಲಭ್ಯಗಳನ್ನೂ ಜನತೆಗೆ ನಿರಾಕರಿಸಲಾಗುತ್ತಿದ್ದು, ಜಮ್ಮು-ಕಾಶ್ಮೀರವನ್ನು ಅತಿ ದೊಡ್ಡ ಜೈಲನ್ನಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


