ಅಫ್ಘಾನ್ ಅಧ್ಯಕ್ಷರ ರ್ಯಾಲಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: 24 ಸಾವು, ಅಶ್ರಫ್ ಘನಿ ಅಪಾಯದಿಂದ ಪಾರು
ಉಗ್ರರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರ ಚುನಾವಣಾ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ನಡೆಸಿದ್ದು, ಸ್ಫೋಟದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ....

ಕಾಬೂಲ್: ಉಗ್ರರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರ ಚುನಾವಣಾ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ನಡೆಸಿದ್ದು, ಸ್ಫೋಟದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಅಫ್ಘಾನ್ ಅಧ್ಯಕ್ಷರು ಅಪಾಯದಿಂದ ಪಾರಾಗಿದ್ದಾರೆ.
ಉತ್ತರ ಅಫ್ಘಾನಿಸ್ತಾನದ ಪರ್ವಾನ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಉಗ್ರರು ಚುನಾವಣಾ ಪ್ರಚಾರ ಸಭೆಯಲ್ಲಿ ಬೈಕ್ ನುಗ್ಗಿಸಿ ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ. ದಾಳಿ ಸಂದರ್ಭದಲ್ಲಿ ಅಧ್ಯಕ್ಷ ಘನಿ ಸ್ಥಳದಲ್ಲಿದ್ದರು. ಆದರೆ ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.
ಯಾವ ಉಗ್ರ ಸಂಘಟನೆಯೂ ಇದುವರೆಗೆ ಈ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತುಕೊಂಡಿಲ್ಲ.
ಈ ಬಾಂಬ್ ಸ್ಫೋಟದ ಬೆನ್ನಿಗೆ ರಾಜಧಾನಿ ಕಾಬೂಲ್ ನಗರದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದೆ. ಮಸೌದ್ ಸ್ಕ್ವಾರ್ ಸಮೀಪ ಒಂದು ಬಾಂಬ್ ಸ್ಫೋಟಿಸಿದ್ದರೆ, ಇನ್ನೊಂದು ಬಾಂಬ್ ಅಮೆರಿಕ ರಾಯಭಾರ ಕಚೇರಿ ಇರುವ ಮ್ಯಾಕ್ರೋರ್ಯಾನ್ 2 ಪ್ರದೇಶದಲ್ಲಿ ಸಂಭವಿಸಿದೆ.
ಅಫ್ಘಾನಿಸ್ತಾನದಲ್ಲಿ ಈ ತಿಂಗಳ ಅಂತ್ಯಕ್ಕೆ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ದೇಶದ ಅಲ್ಲಲ್ಲಿ ಬಾಂಬ್ ಸ್ಫೋಟಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


