ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಅಕ್ಟೋಬರ್ 17ರ ವರೆಗೆ ವಿಸ್ತರಣೆ
ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಅಕ್ಟೋಬರ್

ಲಂಡನ್: ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಅಕ್ಟೋಬರ್ 17ರ ವರೆಗೆ ವಿಸ್ತರಿಸಲಾಗಿದೆ.
ಪ್ರಸ್ತುತ ಜೈಲಿನಲ್ಲಿರುವ 48 ವರ್ಷದ ನೀರವ್ ಮೋದಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಡೇವಿಡ್ ರೊಬಿನ್ಸನ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 17ರ ವರೆಗೆ ವಿಸ್ತರಿಸಿದರು.
ಇದೇ ವೇಳೆ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಮುಂದಿನ ವರ್ಷ ಮೇ 11ರಿಂದ 15ರ ವರೆಗೆ ವಿಚಾರಣೆ ನಡೆಯಲಿದೆ ಎಂದು ಲಂಡನ್ ಕೋರ್ಟ್ ತಿಳಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


