ಹೌದಿ ಮೋದಿ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಸಾಧ್ಯತೆ
ಸೆ.20 ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಡೀ ವಿಶ್ವ ಮೋದಿ -ಟ್ರಂಪ್ ಭಾಗವಹಿಸುವ ಹೌದಿ ಮೋದಿ ಕಾರ್ಯಕ್ರಮದವನ್ನು ಎದುರು ನೋಡುತ್ತಿದೆ.

ಸೆ.20 ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಡೀ ವಿಶ್ವ ಮೋದಿ -ಟ್ರಂಪ್ ಭಾಗವಹಿಸುವ ಹೌದಿ ಮೋದಿ ಕಾರ್ಯಕ್ರಮದವನ್ನು ಎದುರು ನೋಡುತ್ತಿದೆ.
ಹೌದಿ ಮೋದಿ ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸುತ್ತಾರೆ ಎಂಬುದೇ ವಿಶೇಷ ಸುದ್ದಿ. ಅದರಲ್ಲಿ ಮತ್ತೊಂದು ವಿಶೇಷವಿದ್ದು, ಈ ಕಾರ್ಯಕ್ರಮದ್ಲಲಿ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆ ಇದೆ.
ಹೌದಿ ಮೋದಿ ಕಾರ್ಯಕ್ರಮದಲ್ಲಿ ಯಾವುದಾದರೂ ಘೋಷಣೆ ಮಾಡುವವರಿದ್ದೀರಾ? ಎಂದು ಏರ್ ಫೋರ್ಸ್ ನಲ್ಲಿ ಪ್ರಯಾಣ ಮಾಡುತ್ತಾ, ವರದಿಗಾರನೋರ್ವನ ಪ್ರಶ್ನೆಗೆ ಉತ್ತರಿಸಿದ ಡೊನಾಲ್ಡ್ ಟ್ರಂಪ್ ಸಾಧ್ಯತೆ ಇದೆ ಎಂದಷ್ಟೇ ಹೇಳಿದ್ದಾರೆ.
ಹೌದಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಮೋದಿ ಆಹ್ವಾನ ನೀಡಿದ್ದರು, ಇದಕ್ಕೆ ಒಪ್ಪಿಕೊಂಡಿದ್ದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮೋದಿ ಜೊತೆಗೆ ನನಗೆ ಉತ್ತಮ ಬಾಂಧವ್ಯವಿದೆ. ಅಂತೆಯೇ ಪಾಕಿಸ್ತಾನದೊಂದಿಗೂ ಉತ್ತಮ ಬಾಂಧವ್ಯವಿದೆ ಎಂದು ಹೇಳಿದ್ದಾರೆ.
ಹೌದಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಈಗಾಗಲೆ ಸುಮಾರು 50,000 ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


