ಒಂದೇ ವೇದಿಕೆಯಲ್ಲಿ ಮೋದಿ-ಟ್ರಂಪ್, ಪಾಕ್ ಪ್ರಧಾನಿಗೆ ಇಮ್ರಾನ್ ಖಾನ್ ಗೆ ಕಪಾಳ ಮೋಕ್ಷ ಇದ್ದಹಾಗೆ: ಶಲಭ್ ಕುಮಾರ್
ಒಂದೇ ವೇದಿಕೆಯಲ್ಲಿ ಭಾರತದ ಪ್ರಧಾನಿ ಮೋದಿ-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಣಿಸಿಕೊಳ್ಳುತ್ತಿದ್ದು, ಇದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸಿಕ್ಕ ಕಪಾಳ ಮೋಕ್ಷ ಎಂದು 2016ರ ಅಧ್ಯಕ್ಷೀಯ ಚುನಾವಣೆ ವೇಳೆ ಟ್ರಂಪ್ ಅವರ ಪ್ರಚಾರ ಸಲಹೆಗಾರರಾಗಿದ್ದ ಶಲಭ್ ಶಲ್ಲಿ ಕುಮಾರ್ ಹೇಳಿದ್ದಾರೆ.

ಹ್ಯೂಸ್ಟನ್: ಒಂದೇ ವೇದಿಕೆಯಲ್ಲಿ ಭಾರತದ ಪ್ರಧಾನಿ ಮೋದಿ-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಣಿಸಿಕೊಳ್ಳುತ್ತಿದ್ದು, ಇದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸಿಕ್ಕ ಕಪಾಳ ಮೋಕ್ಷ ಎಂದು 2016ರ ಅಧ್ಯಕ್ಷೀಯ ಚುನಾವಣೆ ವೇಳೆ ಟ್ರಂಪ್ ಅವರ ಪ್ರಚಾರ ಸಲಹೆಗಾರರಾಗಿದ್ದ ಶಲಭ್ ಶಲ್ಲಿ ಕುಮಾರ್ ಹೇಳಿದ್ದಾರೆ.
ಹ್ಯೂಸ್ಟನ್ ನಲ್ಲಿ ಮಾತನಾಡಿದ ಶಲಭ್ ಶಲ್ಲಿ ಕುಮಾರ್ ಅವರು, 'ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೆಕೊಳ್ಳಲಿರುವುದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‌ಗೆ ಕಪಾಳಮೋಕ್ಷವೇ ಸರಿ ಎಂದು ಹೇಳಿದ್ದಾರೆ. ಅಂತೆಯೇ ಒಂದುವೇಳೆ ನಾನು ಚುನಾಯಿತನಾದರೆ ಭಾರತಕ್ಕೆ ಶ್ವೇತಭವನದಲ್ಲಿ ಒಬ್ಬ ಒಳ್ಳೆಯ ಸ್ನೇಹಿತ ಸಿಗಲಿದ್ದಾನೆ. ನಾವು ಹಿಂದೂಗಳನ್ನು ಪ್ರೀತಿಸುತ್ತೇವೆ ಎಂದು ಚುನಾವಣಾ ಪ್ರಚಾರದ ವೇಳೆ ಟ್ರಂಪ್ ಹೇಳಿದ್ದರು. ಟ್ರಂಪ್ ಹಾಗೂ ಅವರ ಸರ್ಕಾರ ಈ ವಿಚಾರದಲ್ಲಿ ಬದ್ಧವಾಗಿದೆ’ ಎಂದು ಶಲಭ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ
ಇತ್ತೀಚೆಗೆ ಟ್ರಂಪ್ ಅವರು ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳುವ ಮೂಲಕ ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆಯೂ ಪ್ರತಿಕ್ರಿಯಿಸಿದ ಶಲಭ್ ಕುಮಾರ್ ಅವರು, ‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಆ ಸಂದರ್ಭದಲ್ಲಿ ಕೇಳಲಾದ ಕೆಲವು ಪ್ರಶ್ನೆಗಳಿಗೆ ಉತ್ತರಿಸುವಾಗ ಆ ಹೇಳಿಕೆ ನೀಡಲಾಗಿದೆ. ಅದು ಪೂರ್ವಯೋಜಿತವಲ್ಲ. ಅದರಲ್ಲಿ ಯಾವುದೇ ಉದ್ದೇಶ ಇಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಇನ್ನು ಹ್ಯೂಸ್ಟನ್ ನಲ್ಲಿ ಬಹುನಿರೀಕ್ಷಿತ ‘ಹೌಡಿ ಮೋದಿ’ ಕಾರ್ಯಕ್ರಮವು ಇಂದು ನಡೆಯಲಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ಸಾದ್ಯತೆ ಇದೆ.
Related Article
'ಹೌಡಿ, ಮೋದಿ'ಯಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಟ್ರಂಪ್ ಭಾಷಣ: ಶ್ವೇತ ಭವನ
ಅಮೆರಿಕಾದಲ್ಲಿ ಮೋದಿ ಮೇನಿಯಾ: ಕೆಳಗೆ ಬಿದ್ದ ಹೂವಿನ ಕಡ್ಡಿ ಎತ್ತಿ ಸ್ವಚ್ಛತೆ ಸಾರಿದ ಪ್ರಧಾನಿ!
ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ: ಹ್ಯೂಸ್ಟನ್ ನಲ್ಲಿ ಪ್ರಧಾನಿ ಮೋದಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


