ಹವಾಮಾನ ವೈಫರೀತ್ಯ: 5 ರಾಷ್ಟ್ರಗಳ ವಿರುದ್ಧ ದೂರು ದಾಖಲಿಸಿದ ಗ್ರೆಟಾ ಥನ್ಬರ್ಗ್!
ಸ್ವೀಡನ್ ದೇಶದ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಹಾಗೂ ಇತರ 15 ಮಕ್ಕಳು, ವಿಶ್ವದ ಐದು ಶ್ರೀಮಂತ ರಾಷ್ಟ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಹವಾಮಾನ ವೈಫರೀತ್ಯ ತಡೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿಶ್ವಸಂಸ್ಥೆಯಲ್ಲಿ ದೂರು ದಾಖಲಿಸಿದ್ದಾರೆ.

ನ್ಯೂಯಾರ್ಕ್: ಇತ್ತೀಚಿಗೆ ವಿಶ್ವಸಂಸ್ಥೆ ಹವಾಮಾನ ಶೃಂಗದಲ್ಲಿ ವಿಶ್ವ ನಾಯಕರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸ್ವೀಡನ್ ದೇಶದ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಹಾಗೂ ಇತರ 15 ಮಕ್ಕಳು, ವಿಶ್ವದ ಐದು ಶ್ರೀಮಂತ ರಾಷ್ಟ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಹವಾಮಾನ ವೈಫರೀತ್ಯ ತಡೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿಶ್ವಸಂಸ್ಥೆಯಲ್ಲಿ ದೂರು ದಾಖಲಿಸಿದ್ದಾರೆ.
ವಿಶ್ವಸಂಸ್ಥೆಯ ಹವಾಮಾನ ಶೃಂಗಸಭೆಯಲ್ಲಿ ವಿಶ್ವದ ನಾಯಕರನ್ನು ತರಾಟೆಗೆ ತೆಗೆದುಕೊಂಡ ಕೆಲ ದಿನಗಳಲ್ಲೇ ಐದು ರಾಷ್ಟ್ರಗಳ ವಿರುದ್ಧ ದೂರನ್ನು ದಾಖಲಿಸಲಾಗಿದೆ.
''ಹವಾಮಾನ ವೈಫರೀತ್ಯದಿಂದ ಜನರು ನರಳುತ್ತಾ, ಸಾಯುತ್ತಿದ್ದಾರೆ. ನಿಮ್ಮ ಸುಳ್ಳಿನ ಭರವಸೆಗಳ ಮೂಲಕ ನಮ್ಮ ಕನಸುಗಳು ಹಾಗೂ ಬಾಲ್ಯವನ್ನು ಕಸಿದುಕೊಂಡಿದ್ದೀರಿ, ಆದರೂ, ನಾನು ಅದೃಷ್ಟಶಾಲಿಗಳಲ್ಲಿ ಒಬ್ಬರು '' ಎಂದು ಹೇಳುವ ಮೂಲಕ ಸೋಮವಾರ ವಿಶ್ವದ ನಾಯಕರ ವಿರುದ್ಧ ಗ್ರೆಟಾ ಥನ್ಬರ್ಗ್ ಕಿಡಿಕಾರಿದ್ದರು.
ಜರ್ಮನಿ, ಫ್ರಾನ್ಸ್, ಬ್ರೆಜಿಲ್, ಅರ್ಜೆಂಟೀನಾ ಮತ್ತು ಟರ್ಕಿ ರಾಷ್ಟ್ರಗಳ ವಿರುದ್ಧ ದೂರು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ತಮ್ಮ ಜವಾಬ್ದಾರಿಯನ್ನು ಎತ್ತಿಹಿಡಿಯುವಲ್ಲಿ ಈ ರಾಷ್ಟ್ರಗಳು ವಿಫಲವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


