ಕೊರೋನಾ ಸೋಂಕಿನಿಂದ ಲೆಬನಾನ್‌ನ ಫಿಲಿಪ್ಪಿನ್ಸ್ ರಾಯಭಾರಿ ಸಾವು
ಲೆಬನಾನ್ ದೇಶದಲ್ಲಿನ ಫಿಲಿಪ್ಪೀನ್ಸ್ ರಾಯಭಾರಿ ಬರ್ನಾರ್ಡಿಟಾ ಕ್ಯಾಟಲ್ಲಾ (೬೨) ಕೊರೊನಾ ವೈರಸ್ ರೋಗದಿಂದ ಮೃತಪಟ್ಟಿದ್ದಾರೆ ಎಂದು ಆ ದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

ಬೈರೂತ್: ಲೆಬನಾನ್ ದೇಶದಲ್ಲಿನ ಫಿಲಿಪ್ಪೀನ್ಸ್ ರಾಯಭಾರಿ ಬರ್ನಾರ್ಡಿಟಾ ಕ್ಯಾಟಲ್ಲಾ (೬೨) ಕೊರೊನಾ ವೈರಸ್ ರೋಗದಿಂದ ಮೃತಪಟ್ಟಿದ್ದಾರೆ ಎಂದು ಆ ದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.
ಫಿಲಿಪ್ಪೀನ್ ರಾಯಭಾರಿ ಬರ್ನಾರ್ಡಿಟಾ ಕ್ಯಾಟಲ್ಲಾ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಲೆಬನಾನ್ ಹಾಗೂ ಫಿಲಿಪ್ಪೀನ್ಸ್ ದೇಶಗಳ ನಡುವಣ ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು, ಲೆಬನಾನ್, ಮಲೇಷಿಯಾ ಹಾಗೂ ಇಂಡೋನೇಷ್ಯಾದಲ್ಲಿರುವ ಫಿಲಿಪ್ಪೀನ್ಸ್ ಜನರ ಹಿತಾಸಕ್ತಿ ರಕ್ಷಿಸುವಂತಹ ರಾಜತಾಂತ್ರಿಕ ಕ್ರಮಗಳನ್ನು ಬರ್ನಾರ್ಡಿಟಾ ಕ್ಯಾಟಲ್ಲಾ ಕೈಗೊಂಡಿದ್ದರು ಎಂದು ಸಚಿವಾಲಯ ಪ್ರಶಂಸೆ ವ್ಯಕ್ತಪಡಿಸಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


