ಇಟಲಿಯಲ್ಲಿ ಮತ್ತೆ ಕೊರೋನಾ ಅಬ್ಬರ, ಒಂದೇ ದಿನ ಅಲ್ಲಿ 619 ಸೋಂಕಿತರ ಸಾವು, ಸಾವಿನ ಸಂಖ್ಯೆ 19,468ಕ್ಕೆ ಏರಿಕೆ
ಪ್ರವಾಸಿಗರ ಸ್ವರ್ಗ ಇಟಲಿಯಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 2000ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ಗಂಟೆಗಳಲ್ಲಿ 619 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಇಟಲಿಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 20 ಸಾವಿರದತ್ತ ದಾಪುಗಾಲಿರಿಸಿದೆ.

ರೋಮ್: ಪ್ರವಾಸಿಗರ ಸ್ವರ್ಗ ಇಟಲಿಯಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 2000ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ಗಂಟೆಗಳಲ್ಲಿ 619 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಇಟಲಿಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 20 ಸಾವಿರದತ್ತ ದಾಪುಗಾಲಿರಿಸಿದೆ.
ಇಟಲಿಯಲ್ಲಿ ಶನಿವಾರ ಒಂದೇ ದಿನ ಅಲ್ಲಿ 619 ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಇಟಲಿಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 19,468ಕ್ಕೆ ಏರಿಕೆಯಾಗಿದೆ. ಅಲ್ಲದೇ, ಶುಕ್ರವಾರ 3,951 ಸೋಂಕಿತರು ಪತ್ತೆಯಾಗಿದ್ದು, ಶನಿವಾರ 4,694 ಸೋಂಕು ಪ್ರಕರಣಗಳು ವರದಿಯಾಗಿರುವುದು ಅಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ ಏಪ್ರಿಲ್ 6 ರಿಂದ ನಂತರ ಇದೇ ಮೊದಲ ಬಾರಿಗೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳಾವಾಗಿದೆ. ಅಲ್ಲದೆ, ಏಪ್ರಿಲ್ 4 ನಂತರ ಇದೇ ಮೊದಲ ಬಾರಿಗೆ ಸೋಂಕು ಪ್ರಕರಣಗಳು ಏರಿಕೆಯಾಗಿವೆ.
ಇಟಲಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡಿತ್ತು. ಹೀಗಾಗಿ ಮಾರ್ಚ್ ಅಂತ್ಯದ ಹೊತ್ತಿಗೆ ಸೋಂಕಿನ ಪ್ರಕರಣಗಳು ಮತ್ತು ಸಾವು ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಇಳಿದಿತ್ತಾದರೂ, ಇಟಲಿ ಸರ್ಕಾರದ ನಿರೀಕ್ಷೆಯ ಮಟ್ಟಕ್ಕೆ ತಗ್ಗಿರಲಿಲ್ಲ. ಇದರ ಬೆನ್ನಲ್ಲೇ ಮತ್ತೆ ಕೊರೋನಾ ವೈರಸ್ ತನ್ನ ಮರಣ ಮೃದಂಗ ಮುಂದುವರೆಸಿದೆ. ಸದ್ಯ ಇಟಲಿಯಲ್ಲಿ 152,271 ಸೋಂಕಿತರಿದ್ದು, 32,534 ಮಂದಿ ಈ ವರೆಗೆ ಗುಣಮುಖರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


