WHOಗೆ ಆರ್ಥಿಕ ನೆರವು ಸ್ಥಗಿತ ಮಾಡಿರುವ ಅಮೆರಿಕ ಸರ್ಕಾರ ನಿರ್ಧಾರ ಸರಿಯಲ್ಲ: ವಿಶ್ವಸಂಸ್ಥೆ
ವಿಶ್ವಾದ್ಯಂತ ವ್ಯಾಪಕವಾಗಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಪ್ರಭಾವ ಮುಂದುವರೆಯುತ್ತಿರುವ ಈ ಹೊತ್ತಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ಕಡಿತ ಮಾಡಿರುವ ಅಮೆರಿಕ ನಿಲುವು ಸರಿಯಲ್ಲ ಎಂದು ವಿಶ್ವಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ.

ವಾಷಿಂಗ್ಟನ್: ವಿಶ್ವಾದ್ಯಂತ ವ್ಯಾಪಕವಾಗಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಪ್ರಭಾವ ಮುಂದುವರೆಯುತ್ತಿರುವ ಈ ಹೊತ್ತಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ಕಡಿತ ಮಾಡಿರುವ ಅಮೆರಿಕ ನಿಲುವು ಸರಿಯಲ್ಲ ಎಂದು ವಿಶ್ವಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆ ಅಧ್ಯಕ್ಷ ಅಂಟಾನಿಯೋ ಗುಟೆರೆಸ್ ಅವರು, ಇಡೀ ವಿಶ್ವವೇ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪಾತ್ರ ನಿರ್ಣಾಯಕವಾದದ್ದು, ಎಂತಹುದೇ ಪರಿಸ್ಥಿತಿಯಲ್ಲೂ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕ್ಕೆ ಮತ್ತು ಯೋಜನೆಗಳಿಗೆ ಅಡೆತಡೆಯಾಗಬಾರದು. ಮಾನವೀಯತೆ ಈ ಹೋರಾಟ ನಮ್ಮೆಲ್ಲರದ್ದು. ಹೀಗಾಗಿ ಅಮೆರಿಕ ನಿರ್ಧಾರ ಈ ಸಮಯಕ್ಕೆ ಸರಿಯಲ್ಲ ಎಂದು ಹೇಳಿದ್ದಾರೆ.
ಕೊರೋನಾ ವೈರಸ್ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಹೋರಾಡುತ್ತಿದ್ದು, ಆರೋಗ್ಯ ಕಾರ್ಯಕರ್ತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ವೈರಸ್ ಮತ್ತಷ್ಟು ಜೀವ ಹಾನಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ನಾವು ಇಂತಹ ಕಠಿಣ ಸಂದರ್ಭದಲ್ಲಿ ನಾವು ಒಗ್ಗಟ್ಟು ಪ್ರದರ್ಶನ ಮಾಡಬೇಕು. WHO ಹೋರಾಟಕ್ಕೆ ಬೆಂಬಲವಾಗಿ ನಿಂತು ಸಾಂಘಿಕವಾಗಿ ವೈರಸ್ ತೊಲಗಿಸಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


