ವಿದೇಶ

ಅತ್ಯಂತ ಕೆಟ್ಟ ಪರಿಸ್ಥಿತಿ ಮುಗಿದಿದೆ, ಶೀಘ್ರದಲ್ಲೇ ಅಮೆರಿಕದಲ್ಲಿ ಚಟುವಟಿಕೆಗಳು ಪುನಾರಂಭ: ಟ್ರಂಪ್

ಅಮೆರಿಕ ಕೊರೋನಾ ವೈರಸ್ ಪ್ರಕರಣಗಳ ಅತ್ಯಂತ ಹೀನಾಯ ಸ್ಥಿತಿಯನ್ನು ತಲುಪಿದ್ದು, ಮುಂದಿನ ಒಂದು ತಿಂಗಳಲ್ಲಿ ರಾಜ್ಯಗಳಲ್ಲಿ ಚಟುವಟಿಕೆಗಳು ಪುನಾರಂಭಗೊಳ್ಳಬಹುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಅತ್ಯಂತ ಕೆಟ್ಟ ಪರಿಸ್ಥಿತಿ ಮುಗಿದಿದೆ, ಶೀಘ್ರದಲ್ಲೇ ಅಮೆರಿಕದಲ್ಲಿ ಚಟುವಟಿಕೆಗಳು ಪುನಾರಂಭ: ಟ್ರಂಪ್
ಡೊನಾಲ್ಡ್ ಟ್ರಂಪ್
Published On :

ವಾಷಿಂಗ್ಟನ್:  ಅಮೆರಿಕ ಕೊರೋನಾ ವೈರಸ್ ಪ್ರಕರಣಗಳ ಅತ್ಯಂತ ಹೀನಾಯ ಸ್ಥಿತಿಯನ್ನು ತಲುಪಿದ್ದು, ಮುಂದಿನ ಒಂದು ತಿಂಗಳಲ್ಲಿ ರಾಜ್ಯಗಳಲ್ಲಿ ಚಟುವಟಿಕೆಗಳು ಪುನಾರಂಭಗೊಳ್ಳಬಹುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶ್ವೇತಭವನದ ದಿನನಿತ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಗಳ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿ, ಗುರುವಾರ ರಾತ್ರಿ ಹೊಸ ಮಾರ್ಗಸೂಚಿ ಘೋಷಿಸುವುದಾಗಿ ತಿಳಿಸಿದ್ದಾರೆ.

ಅಮೆರಿಕದಲ್ಲಿ ಹೆಚ್ಚು ಕಡಿಮೆ 6.40 ಲಕ್ಷ ಕೊರೋನಾ ಪ್ರಕರಣಗಳಿದ್ದು, 30,900 ಜನರು ಮೃತಪಟ್ಟಿದ್ದಾರೆ. ಇದು ವಿಶ್ವದ ಅತಿ ಹೆಚ್ಚು ಸೋಂಕು ಪೀಡಿತ ಪ್ರದೇಶವಾಗಿದೆ. 

ನ್ಯೂಯಾರ್ಕ್ ನಗರದಲ್ಲಿ ಸೋಂಕಿತರ ಸಂಖ್ಯೆ 10,367ಕ್ಕೇರಿಕೆಯಾದ ಹಿನ್ನೆಲೆಯಲ್ಲಿ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.  ರಾಷ್ಟ್ರಾದ್ಯಂತ ವಿಧಿಸಿರುವ ನಿಬಂಧನೆಗಳನ್ನು ಸಡಿಲಗೊಳಿಸಿ ವ್ಯವಹಾರ ಮರು ಆರಂಭಿಸುವ ಕುರಿತು ಟ್ರಂಪ್ ರಾಜ್ಯಗಳ ರಾಜ್ಯಪಾಲರು ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.