ಚೀನಾ ಲ್ಯಾಬ್ ನಲ್ಲಿ ಸೃಷ್ಟಿಯಾಯ್ತಾ ಕೊರೋನಾ ವೈರಸ್: ಅಮೆರಿಕ ತನಿಖೆ ಪ್ರಾರಂಭ!
ಕೊರೋನಾ ವೈರಸ್ ನ ಮೂಲ ಇಂದಿಗೂ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಈ ನಡುವೆ ಕೊರೋನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಸೋರಿಕೆಯಾಗಿದೆಯೋ ಅಥವಾ ಬೇರೆ ಮೂಲಗಳಿಂದ ಹರಡಿದೆಯೋ ಎಂಬುದನ್ನು ತಿಳಿಯಲು ತಮ್ಮ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ ಟನ್: ಕೊರೋನಾ ವೈರಸ್ ನ ಮೂಲ ಇಂದಿಗೂ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಈ ನಡುವೆ ಕೊರೋನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಸೋರಿಕೆಯಾಗಿದೆಯೋ ಅಥವಾ ಬೇರೆ ಮೂಲಗಳಿಂದ ಹರಡಿದೆಯೋ ಎಂಬುದನ್ನು ತಿಳಿಯಲು ತಮ್ಮ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಕೊರೋನಾ ವೈರಸ್ ಸೃಷ್ಟಿಯಾಗಿದ್ದರ ರಹಸ್ಯವನ್ನು ಭೇದಿಸುವುದಕ್ಕಾಗಿ ತನಿಖೆ ನಡೆಸಲಾಗುತ್ತಿದೆ, ಸಂಭವಿಸಿರುವ ಈ ಭಯಾನಕ ಪರಿಸ್ಥಿತಿ ಯಾಕೆ ಸೃಷ್ಟಿ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.
ಅಮೆರಿಕದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಮೈಕ್ ಪಾಂಪಿಯೊ ಮಾತನಾಡಿದ್ದು, ಕೊರೋನಾ ವಿಷಯದಲ್ಲಿ ಗೊತ್ತಿರುವ ಮಾಹಿತಿಯ ಕುರಿತು ಚೀನಾ ಪಾರದರ್ಶಕವಾಗಿರಬೇಕು ಎಂದು ತಾಕೀತು ಮಾಡಿದ್ದಾರೆ.
ಚೀನಾದ ವಿದೇಶಾಂಗ ವ್ಯವಹಾರಗಳ ಉನ್ನತ ಅಧಿಕಾರಿಗೆ ಅಮೆರಿಕ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಮೈಕ್ ಪಾಂಪಿಯೋ ಚೀನಾ ಕೋವಿಡ್ ವಿಷಯದಲ್ಲಿ ಪಾರದರ್ಶಕವಾಗಿರಬೇಕು ಮುಂದಿನ ದಿನಗಳಲ್ಲಿ ಕೊರೋನಾ ವೈರಸ್ ಸೋಂಕು ಸ್ಫೋಟಗಳನ್ನು ತಡೆಗಟ್ಟಲು ಚೀನಾ ಮಾಹಿತಿ ಹಂಚಿಕೊಳ್ಳಬೇಕೆಂದು ಹೇಳಿದ್ದರು.
ಅಮೆರಿಕ ನಡೆಗೆ ಚೀನಾ ಅಸಮಾಧಾನ ಹೊರಹಾಕಿದ್ದು, ತಾನು ಕೋವಿಡ್-19 ವಿಷಯದಲ್ಲಿ ಪಾರದರ್ಶಕವಾಗಿಯೇ ಇರುವುದಾಗಿ ಹೇಳಿದೆ. ಇನ್ನು ಅಮೆರಿಕಾಗೆ ಚೀನಾದ ವುಹಾನ್ ಪ್ರಯೋಗಾಲಯದಲ್ಲಿ ನೇರವಾಗಿ ಕಾರ್ಯನಿರ್ವಹಣೆಗೆ ಅವಕಾಶ ನೀಡಿದರೆ ಜಾಗತಿಕ ಮಟ್ಟದಲ್ಲಿ ಜೀವಗಳನ್ನು ರಕ್ಷಿಸಬಹುದು ಎಂದು ಟ್ರಂಪ್ ಆಡಳಿತದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಹೇಳಿಕೆಗೆ ಚೀನಾ ಮತ್ತಷ್ಟು ಕೆರಳಿದ್ದು, ವಿಶ್ವದ ಎರಡು ಬೃಹತ್ ಆರ್ಥಿಕತೆಗಳ ನಡುವೆ ಮತ್ತೆ ಅಸಮಾಧಾನ ಭುಗಿಲೆದ್ದಿದೆ.
ಫಾಕ್ಸ್ ನ್ಯೂಸ್ ವರದಿಯ ಪ್ರಕಾರ ಚೀನಾದ ವೈರಾಲಜಿ ಪ್ರಯೋಗಾಲಯದಿಂದ ಕೊರೋನಾ ವೈರಸ್ ಹರಡಿದೆ. ಇದು ಜೈವಿಕ ಅಸ್ತ್ರವಲ್ಲ. ವೈರಸ್ ವಿರುದ್ಧ ಹೋರಾಡಲು ಅಮೆರಿಕಕ್ಕೆ ಸರಿಸಮಾನದ ಅಥವಾ ಅದಕ್ಕಿಂತಲೂ ಹೆಚ್ಚಿನ ಸಾಮರ್ಥ್ಯವಿದೆ ಎಂದು ತೋರಿಸಲು ಈ ವೈರಸ್ ಅಭಿವೃದ್ಧಿ ಪಡಿಸಿರಬಹುದು ಎಂದು ವರದಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


