ವಿದೇಶ

ಎಫ್ ಡಿಐ ನಿಯಮ ಬದಲಾವಣೆ: ಭಾರತದಲ್ಲಿ ಚೀನಾ ಹೂಡಿಕೆಗೆ ಕಡಿವಾಣ!

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಭಾರತ ಮಹತ್ವದ ಬದಲಾವಣೆಗಳನ್ನು ತಂದಿದ್ದು, ಜಗತ್ತಿನ ದೊಡ್ಡಣ್ಣನಾಗುವ ಕನಸು ಕಾಣುತ್ತಿದ್ದ ಚೀನಾಗೆ ಮರ್ಮಾಘಾತ ಉಂಟಾಗಿದೆ.

ಎಫ್ ಡಿಐ ನಿಯಮ ಬದಲಾವಣೆ: ಭಾರತದಲ್ಲಿ ಚೀನಾ ಹೂಡಿಕೆಗೆ ಕಡಿವಾಣ!
ಚೀನಾ-ಭಾರತ
Published On :

ನವದೆಹಲಿ: ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಭಾರತ ಮಹತ್ವದ ಬದಲಾವಣೆಗಳನ್ನು ತಂದಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಚೀನಾಗೆ ಕಡಿವಾಣ ಬಿದ್ದಿದೆ.

ಕೊರೋನಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭಾರತೀಯ ಕಂಪನಿಗಳನ್ನು ಚೀನಾ ಖರೀದಿ ಅಥವಾ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಗಟ್ಟಲು ಭಾರತ ವಿದೇಶಿ ನೇರ ಬಂಡವಾಳ ಹೂಡಿಕೆಯ ನಿಯಮಗಳನ್ನು ಬದಲಾವಣೆ ಮಾಡಿದೆ. 

ಈ ಬದಲಾವಣೆಯಿಂದಾಗಿ ಭಾರತದ ಜೊತೆಗೆ ಭೂಗಡಿ ಹೊಂದಿರುವ ರಾಷ್ಟ್ರಗಳು ಇಲ್ಲಿ ಹೂಡಿಕೆ ಮಾಡುವುದಕ್ಕೂ ಮುನ್ನ ಭಾರತ ಸರ್ಕಾರದ ಅನುಮತಿಪಡೆಯಬೇಕಾಗುತ್ತದೆ. ಕಳೆದ ತಿಂಗಳು ಚೀನಾ ಹೆಚ್ ಡಿಎಫ್ ಸಿ ಬ್ಯಾಂಕ್ ನ ಷೇರುಗಳನ್ನು ಖರೀದಿಸಿದ ಬೆನ್ನಲ್ಲೇ ಭಾರತ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಈ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಭಾರತ-ಚೀನಾ ನಡುವಿನ ವ್ಯಾಪಾರ ಸಂಬಂಧಗಳಲ್ಲಿ ಗಮನಾರ್ಹ ಬದಲಾವಣೆಗಳಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಭಾರತದಲ್ಲಿ ಸುಮಾರು 26 ಬಿಲಿಯನ್ ಡಾಲರ್ ಮೊತ್ತದ ಹೂಡಿಕೆಯನ್ನು ಚೀನಾ ಮಾಡಿದೆ. ಇತ್ತೀಚಿನ ದಿನಗಳಲ್ಲಿ 30 ಭಾರತೀಯ ಸ್ಟಾರ್ಟ್ ಅಪ್ ಗಳಲ್ಲಿ ಚೀನಾ 4 ಬಿಲಿಯನ್ ಡಾಲರ್ ಹಣವನ್ನು ತೊಡಗಿಸಿತ್ತು. ಟಿಕ್ ಟಾಕ್, ಹೆಲೋ ಸೇರಿದಂತೆ ಭಾರತೀಯ ಗ್ರಾಹಕರಿರುವ ಅನೇಕ ಆಪ್ ಗಳ ಮೂಲಕ ಚೀನಾ ಮಿಲಿಯನ್ ಗಟ್ಟಲೆ ಹಣ ಸಂಪಾದನೆ ಮಾಡುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.