ಅಮೆರಿಕದಲ್ಲಿ ಕೊರೋನಾ ವೈರಸ್ ಗೆ ಒಂದೇ ದಿನ 1997 ಜನ ಬಲಿ, 40,000 ದಾಟಿದ ಸಾವಿನ ಸಂಖ್ಯೆ
ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಮಾರಕ ಕೊರೋನಾ ವೈರಸ್ ಅಕ್ಷರಶಃ ಕಂಗೆಡಿಸಿದ್ದು, ನಿನ್ನೆ ಒಂದೇ ದಿನ ಅಮೆರಿಕದಲ್ಲಿ ಮತ್ತೆ 1,997 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಅಮೆರಿಕದಲ್ಲಿ ಕೋವಿಡ್-19 ವೈರಸ್ ಗೆ ಬಲಿಯಾದವರ ಸಂಖ್ಯೆ 40,661ಕ್ಕೆ ಏರಿಕೆಯಾಗಿದೆ.

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಮಾರಕ ಕೊರೋನಾ ವೈರಸ್ ಅಕ್ಷರಶಃ ಕಂಗೆಡಿಸಿದ್ದು, ನಿನ್ನೆ ಒಂದೇ ದಿನ ಅಮೆರಿಕದಲ್ಲಿ ಮತ್ತೆ 1,997 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಅಮೆರಿಕದಲ್ಲಿ ಕೋವಿಡ್-19 ವೈರಸ್ ಗೆ ಬಲಿಯಾದವರ ಸಂಖ್ಯೆ 40,661ಕ್ಕೆ ಏರಿಕೆಯಾಗಿದೆ.
ಚೀನಾದಿಂದ ಶುರುವಾದ ಕೊರೋನಾ ಅಟ್ಟಹಾಸ ಈಗ ಅಮೆರಿಕದಲ್ಲಿ ಬರೋಬ್ಬರಿ 40,661 ಜನರನ್ನು ಬಲಿ ಪಡೆದಿದೆ. ನಿನ್ನೆ ಒಂದೇ ದಿನ ವೈರಸ್ ಗೆ 1,997 ಜನ ಬಲಿಯಾಗಿದ್ದಾರೆ. ಇನ್ನು ಅಮೆರಿಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 7 59,086ಕ್ಕೆ ಏರಿಕೆಯಾಗಿದೆ. ಈ ಮೂಲಕ ಜಗತ್ತಿನಲ್ಲೇ ಅತೀ ಹೆಚ್ಚು ಕೊರೋನಾ ಪ್ರಕರಣಗಳನ್ನು ಹೊಂದಿದ ದೇಶ ಎಂಬ ಕುಖ್ಯಾತಿಗೆ ಅಮೆರಿಕ ಒಳಗಾಗಿದೆ. ಇನ್ನೂ ಇಟಲಿ ಮತ್ತು ಫ್ರಾನ್ಸ್‌ನಲ್ಲೂ ಸಹ ಕೊರೋನಾ ಮರಣ ಮೃದಂಗ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.
ಈ ಮಾರಕ ವೈರಸ್ ಗೆ ಜಗತ್ತಿನಾದ್ಯಂತ ಕೊರೋನಾ ವೈರಸ್ಗೆ 1,65,106 ಜನರು ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 24,02,072ಕ್ಕೆ ಏರಿಕೆಯಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


