ಕೊರೋನಾವೈರಸ್: ಜಾಗತಿಕವಾಗಿ 2 ಲಕ್ಷ ಮಂದಿಯನ್ನು ಬಲಿಪಡೆದ ಮಹಾಮಾರಿ, ಸೋಂಕಿತರ ಸಂಖ್ಯೆ 2,921,201 ಏರಿಕೆ
ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಈ ವರೆಗೂ ಮಹಾಮಾರಿ ವೈರಸ್ 2 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿದೆ.

ಲಂಡನ್: ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಈ ವರೆಗೂ ಮಹಾಮಾರಿ ವೈರಸ್ 2 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿದೆ.
ಈ ನಡುವೆ ವಿಶ್ವದ ವಿವಿಧ 2,921,201 ಸೋಂಕಿನಿಂದ ಬಳಲುತ್ತಿದ್ದು, ಅಮೆರಿಕಾ ರಾಷ್ಟ್ರ ಒಂದರಲ್ಲಿಯೇ 960,896 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ .ಅಲ್ಲದೆ, ಆ ರಾಷ್ಟ್ರದಲ್ಲಿ ಸಾವಿನ ಸಂಖ್ಯೆ 54,265ಕ್ಕೆ ಏರಿಕೆಯಾಗಿದೆ.
ಇದರಂತೆ ಸೋಂಕಿಗೊಳಗಾಗಿರುವ 2,921,201 ಮಂದಿಯ ಪೈಕಿ 836,969 ಮಂದಿ ವೈರಸ್ ನಿಂದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಸ್ಪೇನ್ ರಾಷ್ಟ್ರದಲ್ಲಿ 223,759 ಮಂದಿ ಸೋಂಕಿನಿಂದ ಬಳಲುತ್ತಿದ್ದು, 22,902 ಜನರು ಬಲಿಯಾಗಿದ್ದಾರೆ. ಇಟಲಿಯಲ್ಲಿಯೂ ಮಹಾಮಾರಿಯ ಆರ್ಭಟ ಹೆಚ್ಚಾಗಿಯೇ ಇದ್ದು, ಈ ವರೆಗೂ 195,351 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 26,384 ಮಂದಿ ಸಾವನ್ನಪ್ಪಿದ್ದಾರೆ.
ಫ್ರಾನ್ಸ್ ನಲ್ಲಿ 161,488 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 22,614 ಜನರು ಸಾವನ್ನಪ್ಪಿದ್ದಾರೆ. ಜರ್ಮನಿಯಲ್ಲಿ 156,513 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 5,877 ಮಂದಿ ಮೃತಪಟ್ಟಿದ್ದಾರೆ. ಬ್ರಿಟನ್ ನಲ್ಲಿ 148,377 ಮಂದಿ ಸೋಂಕಿನಿಂದ ಬಳಲುತ್ತಿದ್ದು, 20,319 ಮಂದಿ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


