ಅಮೆರಿಕಾದಲ್ಲಿ ಪ್ರತಿ 7ನೇ ವೈದ್ಯ ಭಾರತೀಯ, ಕೋವಿಡ್ ವಿರುದ್ಧ ಸೈನಿಕರಂತೆ ಹೋರಾಟ!
ಅಮೆರಿಕಾದಲ್ಲಿ ಕೋವಿಡ್-19 ಗೆ ಚಿಕಿತ್ಸೆ ನೀಡುತ್ತಿರುವ ಭಾರತೀಯ ವೈದ್ಯರಿಗೆ ಗೌರವ ದೊರೆತ ಸುದ್ದಿ ಇತ್ತೀಚೆಗೆ ವೈರಲ್ ಆಗಿತ್ತು. ಈಗ ಭಾರತೀಯರು ಹೆಮ್ಮೆ ಪಡುವಂತಹ ಮತ್ತೊಂದು ಅಂಶ ಬೆಳಕಿಗೆ ಬಂದಿದೆ.

ನ್ಯೂಯಾರ್ಕ್: ಅಮೆರಿಕಾದಲ್ಲಿ ಕೋವಿಡ್-19 ಗೆ ಚಿಕಿತ್ಸೆ ನೀಡುತ್ತಿರುವ ಭಾರತೀಯ ವೈದ್ಯರಿಗೆ ಗೌರವ ದೊರೆತ ಸುದ್ದಿ ಇತ್ತೀಚೆಗೆ ವೈರಲ್ ಆಗಿತ್ತು. ಈಗ ಭಾರತೀಯರು ಹೆಮ್ಮೆ ಪಡುವಂತಹ ಮತ್ತೊಂದು ಅಂಶ ಬೆಳಕಿಗೆ ಬಂದಿದೆ.
ಅಮೆರಿಕಾದಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಪೈಕಿ ಪ್ರತಿ 7 ನೇಯ ವೈದ್ಯರು ಭಾರತೀಯ ಮೂಲದವರಾಗಿದ್ದಾರೆ. ಈ ಮೂಲಕ ಅಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯರು ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ಈ ಬಗ್ಗೆ ಭಾರತೀಯ ಮೂಲದ ಅಮೆರಿಕ ವೈದ್ಯರ ಸಂಘಟನೆಯ ಅಧ್ಯಕ್ಷ ಡಾ.ಸುರೇಶ್ ರೆಡ್ಡಿ ಮಾತನಾಡಿದ್ದು, ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿರುವ ಭಾರತೀಯ ಸಮುದಾಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಅಮೆರಿಕಾದಲ್ಲಿ ಕೋವಿಡ್-19 ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರ ಪೈಕಿ ಪ್ರತಿ 7 ನೇ ವೈದ್ಯ ಭಾರತೀಯರಾಗಿದ್ದು, ಸೈನಿಕರಂತೆ ಹೋರಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಕೋವಿಡ್-19 ಗೆ ಸಂಬಂಧಪಟ್ಟಂತೆ ಬೇರೆ ವಿಷಯಗಳ ಬಗ್ಗೆಯೂ ಮಾತನಾಡಿದ್ದು, ವಿಶ್ವಾದ್ಯಂತ ಇರುವ ಸರ್ಕಾರಗಳು ಲಾಕ್ ಡೌನ್ ನ್ನು ಏಕಾ ಏಕಿ ತೆರವುಗೊಳಿಸಿ ಆರ್ಥಿಕತೆಯನ್ನು ಪುನಾರಂಭ ಮಾಡುವುದಕ್ಕೆ ಸಾಧ್ಯವಿಲ್ಲ ಒಂದು ವೇಳೆ ಆ ರೀತಿ ಮಾಡಿದರೆ ಅದರಿಂದ ಉಂಟಾಗುವ ಅನಾಹುತ ದೊಡ್ಡದಿರಲಿದೆ ಎಂದು ಎಚ್ಚರಿಸಿದ್ದಾರೆ.
ಕೊರೋನಾ ವಿರುದ್ಧದ ಹೋರಾಟ ದೀರ್ಘವಾದದ್ದು, ಅದು ಕೆಲವೇ ತಿಂಗಳುಗಳಲ್ಲಿ ಮುಗಿಯುವಂಥದ್ದಲ್ಲ 1-2 ವರ್ಷಗಳ ಕಾಲ, ಮದ್ದು ಸಿಗುವವರೆಗೂ ಹೋರಾಟ ಮುಂದುವರೆಯಲಿದೆ. ಹರಡುವಿಕೆ ನಿಯಂತ್ರಣ ಸರ್ಕಾರ ಕೈಗೊಳ್ಳುವ ಕ್ರಮಗಳು, ವೈದ್ಯರ ಶ್ರಮ, ಜೊತೆಗೆ ನಿಯಮಗಳನ್ನು ಪಾಲಿಸುವ ಜನರಿಂದ ಮಾತ್ರ ಕೋವಿಡ್-19 ರ ವಿರುದ್ಧದ ಹೋರಾಟದಲ್ಲಿ ಗೆಲುವು ಸಾಧ್ಯ ಎಂದು ಸುರೇಶ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


