ಏಷ್ಯಾ ದೇಶಗಳು ದೀರ್ಘಕಾಲದವರೆಗೆ ಕೊರೋನಾ ಮಹಾಮಾರಿ ವಿರುದ್ಧ ಹೋರಾಡಬೇಕು; ಡಬ್ಲ್ಯುಎಚ್‌ಒ ಎಚ್ಚರಿಕೆ
ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳ ಏರಿಕೆ ಗಮನಿಸಿದರೆ ಅತಿ ಹೆಚ್ಚು ಜನಸಂಖ್ಯೆಯಿರುವ ವಿಶೇಷವಾಗಿ ಏಷಿಯಾ ದೇಶಗಳಲ್ಲಿ ಸಾಂಕ್ರಮಿಕದ ಹೋರಾಟ ದೀರ್ಘಕಾಲಿಕವಾಗಿರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಭಿಪ್ರಾಯಪಟ್ಟಿದೆ.

ವಿಶ್ವಸಂಸ್ಥೆ: ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳ ಏರಿಕೆ ಗಮನಿಸಿದರೆ ಅತಿ ಹೆಚ್ಚು ಜನಸಂಖ್ಯೆಯಿರುವ ವಿಶೇಷವಾಗಿ ಏಷಿಯಾ ದೇಶಗಳಲ್ಲಿ ಸಾಂಕ್ರಮಿಕದ ಹೋರಾಟ ದೀರ್ಘಕಾಲಿಕವಾಗಿರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಭಿಪ್ರಾಯಪಟ್ಟಿದೆ.
ಆರು ತಿಂಗಳ ಹಿಂದೆ ಡಬ್ಲ್ಯುಎಚ್‌ಒ ಕೊರೋನಾ ವೈರಸ್ ಸಾಂಕ್ರಮಿಕವನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿತ್ತು. ಅಂದಿನಿಂದ ಇಂದಿನವರೆಗೆ ವಿಶ್ವದಲ್ಲಿ 6.80 ಲಕ್ಷ ಜನರು ಮೃತಪಟ್ಟಿದ್ದು, 17.5 ಮಿಲಿಯನ್ ಜನರಿಗೆ ಸೋಂಕು ತಗುಲಿದೆ.
ವಿಶ್ವದ ಹೆಚ್ಚಿನ ದೇಶಗಳು ಕೋವಿಡ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದ್ದು, ವಿಶೇಷವಾಗಿ ಏಷ್ಯಾದ ದೇಶಗಳ ಸ್ಥಿತಿಗತಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಈ ದೇಶಗಳು ಭಾರಿ ಜನಸಂಖ್ಯೆ ಮತ್ತು ಅಸಮರ್ಪಕ ಆರೋಗ್ಯ ವ್ಯವಸ್ಥೆ ಹೊಂದಿವೆ ಮತ್ತು ಕಠಿಣ ನಿರ್ಬಂಧಗಳ ಹೊರತಾಗಿಯೂ ಪ್ರಕರಣಗಳು ಹೆಚ್ಚುತ್ತಿವೆ ಎಂದು ಡಬ್ಲ್ಯುಎಚ್‌ಒ ವೆಬ್‌ಸೈಟ್ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


