ಡೊನಾಲ್ಡ್ ಟ್ರಂಪ್ ಅಮೆರಿಕದ ಸರಿಯಾದ ಅಧ್ಯಕ್ಷರಲ್ಲ- ಮಿಚೆಲ್ ಒಬಾಮಾ
ಡೊನಾಲ್ಡ್ ಟ್ರಂಪ್ ಅಮೆರಿಕಾದ ಸರಿಯಾದ ಅಧ್ಯಕ್ಷರಲ್ಲ ಎಂದು ಹೇಳಿರುವ ಮಿಚೆಲ್ ಒಬಾಮಾ, ಜೊ ಬೀಡನ್ ಅವರಿಗೆ ದೇಶದ ಜನತೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕಾದ ಸರಿಯಾದ ಅಧ್ಯಕ್ಷರಲ್ಲ ಎಂದು ಹೇಳಿರುವ ಮಿಚೆಲ್ ಒಬಾಮಾ,ಜೊ ಬೀಡನ್
ಅವರಿಗೆ ದೇಶದ ಜನತೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿನ ಮಕ್ಕಳ ಪರಿಸ್ಥಿತಿ ಸಂಕಷ್ಟದಲ್ಲಿರುವುದಾಗಿ ಅಮೆರಿಕಾದ ಮಾಜಿ ಪ್ರಥಮ ಮಹಿಳೆ ಸಮಾವೇಶವೊಂದರಲ್ಲಿ ಹೇಳಿದರು.
ನವೆಂಬರ್ 3 ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧ 77 ವರ್ಷದ ಜೋ ಬಿಡೆನ್ ಸ್ಪರ್ಧಿಸಿದ್ದಾರೆ. ಭಾರತೀಯ ಮೂಲದ ಸೆನೆಟರ್ ಕಮಲ್ ಹ್ಯಾರಿಸ್ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅಧಿಕಾರವಧಿಯಲ್ಲಿ ತನ್ನ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. 2016ರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ ಮತ ನೀಡಿದವರು ಈ ಬಾರಿ ಜೋ ಬಿಡೆನ್ ಅವರಿಗೆ ಮತ ನೀಡಬೇಕಾಗಿದೆ. ನಮ್ಮ ಜೀವನ ಅವರಂತಹವರ ಮೇಲೆ ಅವಲಂಬಿತವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


