ಜಗತ್ತಿನಲ್ಲೇ ಅತೀ ದೊಡ್ಡ ಪ್ರಯೋಗ: ಜಾನ್ಸನ್ ಅಂಡ್ ಜಾನ್ಸನ್‌ನಿಂದ 60,000 ಮಂದಿ ಮೇಲೆ ಮೂರನೇ ಹಂತದ ಲಸಿಕೆ ಪ್ರಯೋಗ
ಕೊರೋನಾ ವೈರಸ್ ಸೋಂಕಿಗೆ ಲಸಿಕೆ ಕಂಡುಹಿಡಿಯುವ ರೇಸ್ ನಲ್ಲಿ ಅಮೆರಿಕ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಕೂಡ ಮುಂಚೂಣಿಯಲ್ಲಿದ್ದು, ಈ ಸಂಸ್ಥೆ ಇದೀಗ ಜಗತ್ತಿನ ಅತೀ ದೊಡ್ಡ ಪ್ರಮಾಣದ ಲಸಿಕೆ ಪ್ರಯೋಗ ನಡೆಸುತ್ತಿದೆ.

ವಾಷಿಂಗ್ಟನ್: ಕೊರೋನಾ ವೈರಸ್ ಸೋಂಕಿಗೆ ಲಸಿಕೆ ಕಂಡುಹಿಡಿಯುವ ರೇಸ್ ನಲ್ಲಿ ಅಮೆರಿಕ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಕೂಡ ಮುಂಚೂಣಿಯಲ್ಲಿದ್ದು, ಈ ಸಂಸ್ಥೆ ಇದೀಗ ಜಗತ್ತಿನ ಅತೀ ದೊಡ್ಡ ಪ್ರಮಾಣದ ಲಸಿಕೆ ಪ್ರಯೋಗ ನಡೆಸುತ್ತಿದೆ.
ಹೌದು.. ಕೊರೋನಾ ವೈರಸ್ ವಿರುದ್ಧ ಜಾನ್ಸನ್ ಆಂಡ್ ಜಾನ್ಸನ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಸಿದ್ಧತೆ ನಡೆದಿದ್ದು, ಈ ಪ್ರಯೋಗದಲ್ಲಿ ಜಗತ್ತಿನಲ್ಲೇ ಅತೀ ದೊಡ್ಡ ಪ್ರಮಾಣದ ಅಂದರೆ ಸುಮಾರು 60,000 ಸ್ವಯಂಸೇವಕರನ್ನು ಬಳಸಿಕೊಳ್ಳಲಾಗುತ್ತಿದೆ.
ಈ ಬಗ್ಗೆ ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಮುಂಬರುವ ಸೆಪ್ಟೆಂಬರ್‌ನಲ್ಲಿ ಪ್ರಯೋಗ ಆರಂಭಗೊಳ್ಳುವ ನಿರೀಕ್ಷೆ ಇದೆ. ಅಮೆರಿಕ, ಬ್ರೆಜಿಲ್, ಮೆಕ್ಸಿಕೊ ಸೇರಿದಂತೆ 180 ಕಡೆಗಳಲ್ಲಿ ಪ್ರಯೋಗ ನಡೆಯಲಿದೆ ಎಂದು ವರದಿ ಉಲ್ಲೇಖಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಾನ್ಸನ್ ಆಂಡ್ ಜಾನ್ಸನ್ ವಕ್ತಾರರು, ಲಸಿಕೆಯ ಮೊದಲೆರಡು ಪ್ರಯೋಗಳು ಬಹುತೇಕ ಯಶಸ್ವಿಯಾಗಿದ್ದು, ಇದೇ ಕಾರಣಕ್ಕೆ ಮೂರನೇ ಹಂತದ ಪ್ರಯೋಗ ಆದಷ್ಟು ದೃಢವಾಗಿರಬೇಕು ಎಂದು ಉದ್ದೇಶಿಸಲಾಗಿದೆ. ಇದರಲ್ಲಿ ಸುಮಾರು 60,000 ಸ್ವಯಂಸೇವಕರು ಭಾಗಿಯಾಗಲಿದ್ದು, ಹೆಚ್ಚಿನ ಪ್ರಕರಣ ಹೊಂದಿರುವ ಕಡೆಗಳಲ್ಲೇ ನಡೆಸಲಾಗುವುದು. ಮೂರನೇ ಹಂತದ ಪ್ರಯೋಗಕ್ಕೆ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


