ರಿಪಬ್ಲಿಕನ್ ಪಕ್ಷದ ಉಪಾಧ್ಯಕ್ಷ ನಾಮನಿರ್ದೇಶನಕ್ಕೆ ಮೈಕ್ ಪೆನ್ಸ್ ಅಂಗೀಕಾರ
ಮೈಕ್ ಪೆನ್ಸ್ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ತಮ್ಮ ನಾಮನಿರ್ದೇಶನವನ್ನು ಅಂಗೀಕರಿಸಿದ್ದಾರೆ.

ವಾಷಿಂಗ್ ಟನ್: ಮೈಕ್ ಪೆನ್ಸ್ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ತಮ್ಮ ನಾಮನಿರ್ದೇಶನವನ್ನು ಅಂಗೀಕರಿಸಿದ್ದಾರೆ.
ನ್ಯಾಷನಲ್ ರಿಪಬ್ಲಿಕನ್ ಕನ್ವೆನ್ಷನ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಮೈಕ್ ಪೆನ್ಸ್ ಹೆಸರನ್ನು ಘೋಷಣೆ ಮಾಡಲಾಗಿದೆ.
ನಾಲ್ಕು ವರ್ಷಗಳ ಹಿಂದೆ ಇದೇ ಉಪಾಧ್ಯಕ್ಷ ಸ್ಥಾನಕ್ಕೆ ಒಪ್ಪಿಗೆ ಸೂಚಿಸಿ ಕರೆಗೆ ಓಗೊಟ್ಟಿದ್ದೆ ಏಕೆಂದರೆಅಮೆರಿಕವನ್ನು ಮತ್ತೊಮ್ಮೆ ಮಹಾನ್ ರಾಷ್ಟ್ರವನ್ನಾಗಿ ಮಾಡುವ ನಾಯಕತ್ವ ಹಾಗೂ ದೂರದೃಷ್ಟಿ ಡೊನಾಲ್ಡ್ ಟ್ರಂಪ್ ಅವರಲ್ಲಿತ್ತು ಎಂಬುದು ನನಗೆ ತಿಳಿದಿತ್ತು ಎಂದು ಪೆನ್ಸ್ ಹೇಳಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಟ್ರಂಪ್ ಅವರು ಸತತ ದಾಳಿಗಳನ್ನು ಸಹಿಸಿಕೊಂಡಿರುವುದನ್ನು ನೋಡಿದ್ದೇನೆ, ಆದರೆ ಪ್ರತಿ ದಿನವೂ ಅವರ ಮಾತನ್ನು ಉಳಿಸಿಕೊಳ್ಳುವುದಕ್ಕೆ ಹೋರಾಡುತ್ತಿದ್ದಾರೆ ಎಂದು ಪೆನ್ಸ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


