ವಿದೇಶ

ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಬಾಲಕಿಯರು ಸೇನೆಯ ವಶಕ್ಕೆ 

ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯಲ್ಲಿ ತಿಳಿಯದೆ ಆಕಸ್ಮಿಕವಾಗಿ ಗಡಿ ದಾಟಿದ ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಭಾರತೀಯ ಸೇನೆ ಶನಿವಾರ ಬೆಳಗ್ಗೆ ವಶಕ್ಕೆ ತೆಗೆದುಕೊಂಡಿದೆ.

ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಬಾಲಕಿಯರು ಸೇನೆಯ ವಶಕ್ಕೆ 
ಸಾಂದರ್ಭಿಕ ಚಿತ್ರ
Published On :

ಜಮ್ಮು: ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯಲ್ಲಿ ತಿಳಿಯದೆ ಆಕಸ್ಮಿಕವಾಗಿ ಗಡಿ ದಾಟಿದ ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಭಾರತೀಯ ಸೇನೆ ಶನಿವಾರ ಬೆಳಗ್ಗೆ ವಶಕ್ಕೆ ತೆಗೆದುಕೊಂಡಿದೆ.

ಪಾಕ್ ಆಕ್ರಮಿತ ಕಾಶ್ಮೀರದ ಗಡಿ ಸಮೀಪದ ಕಹುತಾ ತೆಹ್ಸಿಲ್ ನ ಅಬ್ಬಾಸ್ ಪುರ್ ಗ್ರಾಮದ 17 ವರ್ಷದ ಲೈಬಾ ಜಬೈರ್ ಮತ್ತು 13 ವರ್ಷದ ಸನಾ ಜಬೈರ್ ಎಂಬ ಬಾಲಕಿಯರು ಇಂದು ಬೆಳಗ್ಗೆ ಪೊಂಚ್ ಸೆಕ್ಟರ್ ನಲ್ಲಿ ಭಾರತ ಕಡೆ ಆಕಸ್ಮಿಕವಾಗಿ ಪ್ರವೇಶಿಸಿದ್ದಾರೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ತಿಳಿಸಿದ್ದಾರೆ.

ಗಡಿ ನಿಯಂತ್ರಣಾ ದಾಟಿದ್ದನ್ನು ಗಮನಿಸಿರುವ ಭಾರತೀಯ ಪಡೆಗಳು, ಬಾಲಕಿಯರಿಗೆ ಯಾವುದೇ ತೊಂದರೆಯಾಗದಂತೆ ಸಂಯಮ ತೋರಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ಆದಷ್ಟೂ ಬೇಗ ಹಸ್ತಾಂತರಿಸಲು ಪ್ರಯತ್ನಗಳು ಸಾಗಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.