ಜಾಗತಿಕವಾಗಿ ಕೊರೋನ ಪೀಡಿತರ ಸಂಖ್ಯೆ 67 ದಶಲಕ್ಷ!
ಜಗತ್ತಿನಾದ್ಯಂತ ಕೊರೋನ ಸೋಂಕು ಪೀಡಿತರ ಸಂಖ್ಯೆ 6 ಕೋಟಿ 70 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಅಮೆರಿಕದ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಹೊಸ ಮಾಹಿತಿ ಹೇಳಿದೆ.

ಮಾಸ್ಕೋ: ಜಗತ್ತಿನಾದ್ಯಂತ ಕೊರೋನ ಸೋಂಕು ಪೀಡಿತರ ಸಂಖ್ಯೆ 6 ಕೋಟಿ 70 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಅಮೆರಿಕದ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಹೊಸ ಮಾಹಿತಿ ಹೇಳಿದೆ.
ಕೇಂದ್ರದ ಇತ್ತೀಚಿನ ಮಾಹಿತಿಯ ಪ್ರಕಾರ, ಪ್ರಪಂಚದಾದ್ಯಂತ ದೃಡಪಡಿಸಿದ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ 67 ಮಿಲಿಯನ್ ಮೀರಿದೆ. ಸೋಮವಾರ ದವರೆಗೆ ಬಂದಿರುವ ವರದಿಗಳ ಪ್ರಕಾರ ವಿಶ್ವದಲ್ಲಿ 67,004,543 ದೃಡಪಡಿಸಿದ ಕರೋನ ಪ್ರಕರಣಗಳು ದಾಖಲಾಗಿವೆ.
ಈವರೆಗೆ ಜಾಗತಿಕವಾಗಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,535,038 ಆಗಿದೆ. ಚೇತರಿಸಿಕೊಂಡ ವ್ಯಕ್ತಿಗಳ ಸಂಖ್ಯೆ 43,032,444ಕ್ಕೆ ತಲುಪಿದೆ. ದೃಡಪಟ್ಟ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆಯ ರಾಷ್ಟ್ರಗಳ ಸಾಲಿನಲ್ಲಿ ಅಮೆರಿಕ ನಂತರ, ಭಾರತ ಮತ್ತು ಬ್ರೆಜಿಲ್ ಮೊದಲ ಮೂರು ರಾಷ್ಟ್ರಗಳಿವೆ. 2.4 ಮಿಲಿಯನ್ ಪ್ರಕರಣ ದಾಖಲಿಸಿರುವ ರಷ್ಯಾ ಸದ್ಯ ನಾಲ್ಕನೇ ಸ್ಥಾನದಲ್ಲಿದೆ ಎಂದೂ ವರದಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


