ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಲಂಡನ್'ನಲ್ಲೂ ಪ್ರತಿಭಟನೆ: ಭಾರತೀಯ ದೂತವಾಸ ಕಚೇರಿಗೆ ಭಿಗಿಭದ್ರತೆ
ಭಾರತ ಸರ್ಕಾರದ ಕೃಷಿ ಸುಧಾರಣಾ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಲಂಡನ್ ನಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ.

ಲಂಡನ್: ಭಾರತ ಸರ್ಕಾರದ ಕೃಷಿ ಸುಧಾರಣಾ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಲಂಡನ್ ನಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ.
ಕೊರೋನ ನಿಯಮ ಉಲ್ಲಂಘಿಸಿದ್ದಕ್ಕಾಗಿ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದೂತವಾಸ ಕಚೇರಿ ಎದುರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಗುಂಪುಗೂಡಿ ರೈತರ ಬೇಡಿಕೆ ಈಡೇರಿಸಬೇಕೆಂದು ಹೋರಾಟ ನಡೆಸಿದ್ದು ಕಚೇರಿಗೆ ಬಿಗಿಭದ್ರತೆ ಒದಗಿಸಲಾಗಿದ್ದು ಸಾವಿರಾರು ಪೊಲೀಸರನ್ನು ಬಂದೋ ಬಸ್ತ್ ಗೆ ನಿಯೋಜನೆ ಮಾಡಲಾಗಿದೆ.
ರೈತರಿಗೆ ನ್ಯಾಯ ಬೇಕು- ನ್ಯಾಯ ಸಿಗಲೇಬೇಕು ಎಂಬ ಭಿತ್ತಿಪತ್ರ ಫಲಕ ಸೇರಿದಂತೆ ಹಲವು ಬಗೆಯ ಘೋಷಣಾ ಫಲಕ ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇರೆಗೆ ಹಲವು ರೈತ ಪರ ಹೋರಾಟಗಾರರನ್ನು ಬಂಧಿಸಲಾಗಿದೆ ಎಂದೂ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


