ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗೆ ಕೋವಿಡ್ ಪಾಸಿಟಿವ್
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಏಳು ದಿನಗಳ ಸ್ವಯಂ ಐಸೋಲೇಷನ್ ನಲ್ಲಿದ್ದಾರೆ.

ಪ್ಯಾರಿಸ್: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಏಳು ದಿನಗಳ ಸ್ವಯಂ ಐಸೋಲೇಷನ್ ನಲ್ಲಿದ್ದಾರೆ.
ಮೊದಲ ಬಾರಿಗೆ ರೋಗ ಲಕ್ಷಣ ಕಂಡುಬಂದ ನಂತರ ಪರೀಕ್ಷೆಗೊಳಪಟ್ಟ ಎಮ್ಯಾನುಯೆಲ್ ಮ್ಯಾಕ್ರನ್ ಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ನಿಯಮಗಳಿಗೆ ಅನುಸಾರವಾಗಿ ಮ್ಯಾಕ್ರನ್ ಈಗ ಏಳು ದಿನಗಳವರೆಗೆ ಸ್ವಯಂ ಐಸೋಲೇಷನ್ ನಲ್ಲಿದ್ದು, ಕೆಲಸ ಮುಂದುವರೆಸುತ್ತಾರೆ. ಆಡಳಿತಾತ್ಮಕ ಚಟುವಟಿಕೆಗಳನ್ನು ದೂರದಿಂದಲೇ ನಿರ್ವಹಿಸುತ್ತಾರೆ ಎಂದು ಹೇಳಲಾಗಿದೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ವಿಶ್ವದಾದ್ಯಂತ ಅನೇಕ ಸರ್ಕಾರದ ಮುಖ್ಯಸ್ಥರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಫ್ರೆಂಚ್ ಅಧ್ಯಕ್ಷರು ಸಹ ಅವರ ಪಟ್ಟಿಗೆ ಸೇರಿದ್ದಾರೆ.
ಫ್ರಾನ್ಸ್ ನಲ್ಲಿ ಕೊರೋನಾವೈರಸ್ ಎರಡನೇ ಅಲೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಈ ವಾರದ ಆರಂಭದಿಂದಲೂ ನಿರ್ಬಂಧ ಹೇರಲಾಗಿದೆ. ಆದರೆ, ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಸಾಗಿದೆ.
ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರೆಸ್ಟೋರೆಂಟ್ ಗಳು, ಚಿತ್ರಮಂದಿರಗಳು ಮುಚ್ಚಿರುವಂತೆಯೇ, ದೇಶಾದ್ಯಂತ 8 ಗಂಟೆಯಿಂದ ಇಡೀ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


