ಸಾರ್ವಜನಿಕವಾಗಿ ಫಿಜರ್ ಕೋವಿಡ್ ಲಸಿಕೆ ಪಡೆದ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್
ಮಾರಕ ಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿರುವ ಅಮೆರಿಕದಲ್ಲಿ ಲಸಿಕೆ ವಿತರಣಾ ಕಾರ್ಯ ಆರಂಭವಾಗಿದ್ದು, ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರು ಸೋಮವಾರ ಅವರ ಮೊದಲ ಕೋವಿಡ್–19 ಲಸಿಕೆ ಹಾಕಿಸಿಕೊಂಡಿದ್ದಾರೆ.

ವಾಷಿಂಗ್ಟನ್: ಮಾರಕ ಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿರುವ ಅಮೆರಿಕದಲ್ಲಿ ಲಸಿಕೆ ವಿತರಣಾ ಕಾರ್ಯ ಆರಂಭವಾಗಿದ್ದು, ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರು ಸೋಮವಾರ ಅವರ ಮೊದಲ ಕೋವಿಡ್–19 ಲಸಿಕೆ ಹಾಕಿಸಿಕೊಂಡಿದ್ದಾರೆ.
ಲಸಿಕೆ ಸುರಕ್ಷತೆಯನ್ನು ಅಮೆರಿಕದ ನಾಗರಿಕರಿಗೆ ಸಾರುವ ನಿಟ್ಟಿನಲ್ಲಿ ಟಿವಿ ನೇರ ಪ್ರಸಾರದಲ್ಲಿ ಬೈಡನ್ ಲಸಿಕೆ ಹಾಕಿಸಿಕೊಂಡರು. ಕ್ರಿಸ್ಟಿಯಾನಾಕೇರ್ ಹಾಸ್ಪೆಟಲ್‌ನ ನರ್ಸ್ ಒಬ್ಬರು ಫಿಝರ್ ಮತ್ತು ಬಯೋಎನ್‌ಟೆಕ್ ಅಭಿವೃದ್ಧಿ ಪಡಿಸಿರುವ ಕೋವಿಡ್ ಲಸಿಕೆಯನ್ನು ಅವರಿಗೆ ನೀಡಿದರು. ಲಸಿಕೆ ಪಡೆದ ಬಳಿಕ ಮಾತನಾಡಿದ ಬೈಡನ್, ಲಸಿಕೆ ಲಭ್ಯವಾಗುತ್ತಿದ್ದಂತೆ ಜನರು ಅದನ್ನು ಪಡೆಯಲು ಸಿದ್ಧರಿರಲಿ ಎಂಬ ಕಾರಣಕ್ಕಾಗಿ ನಾನು ಲಸಿಕೆ ಪಡೆದುಕೊಂಡಿದ್ದೇನೆ' ಎಂದು ಹೇಳಿದರು.
ಬೈಡನ್ ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದನ್ನು ಚುನಾವಣಾ ಪ್ರಚಾರ ದಿನಗಳಿಂದಲೂ ಅನುಸರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಉಪಾಧ್ಯಕ್ಷ ಮೈಕ್ ಪೆನ್ಸ್ ಸೇರಿದಂತೆ ಇತರೆ ಸಂಸದರು ಶುಕ್ರವಾರ ಶ್ವೇತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


