ವಿದೇಶ

ಕೊರೋನಾ ವೈರಸ್ ನ ಹೊಸ ಸ್ವರೂಪ: ವಿಶ್ವದಾದ್ಯಂತ 24 ಗಂಟೆಗಳಲ್ಲಿ 5,75,000 ಕೇಸ್ ಪತ್ತೆ

ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಕೊರೋನಾ ವೈರಸ್ ನ ಹೊಸ ಸ್ವರೂಪ: ವಿಶ್ವದಾದ್ಯಂತ 24 ಗಂಟೆಗಳಲ್ಲಿ 5,75,000 ಕೇಸ್ ಪತ್ತೆ
ಸಂಗ್ರಹ ಚಿತ್ರ
Published On :

ಜಿನಿವಾ; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. 

24 ಗಂಟೆಗಳಲ್ಲಿ 575,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 75,704,857ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ವರೆಗೂ 1,690,061 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 

ಈ ನಡುವೆ ಕೊರೋನಾಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಅಕ್ಷರಶಃ ನಲುಗಿ ಹೋಗಿದ್ದು, ಈ ವರೆಗೂ ಆ ರಾಷ್ಟ್ರದಲ್ಲಿ ಬರೋಬ್ಬರಿ 326,772 ಮಂದಿ ಬಲಿಯಾಗಿದ್ದಾರೆ, ಅಲ್ಲದೆ, 18,473,716ಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆ. 

ಇನ್ನು ಹೆಚ್ಚು ಕೊರೋನಾ ಬಾಧಿತ ರಾಷ್ಟ್ರಗಳ 10 ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈ ವರೆಗೂ 10,075,422 ಮಂದಿ ಸೋಂಕಿಗೊಳಗಾಗಿದ್ದು, 146,145 ಮಂದಿ ಸಾವನ್ನಪ್ಪಿದ್ದಾರೆ. 3ನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 7,264,221 ಮಂದಿ ಸೋಂಕಿನಿಂದ ಬಳಲುತ್ತಿದ್ದು,    187,322 ಮಂದಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.