ಅಮೆರಿಕಾದಲ್ಲಿ ದಶಲಕ್ಷ ಮಂದಿಗೆ ಕೊರೋನಾ ಲಸಿಕೆ: ಸಿಡಿಸಿ ನಿರ್ದೇಶಕ ರಾಬರ್ಟ್ ರೆಡ್ ಫೀಲ್ಡ್
ಅಮೆರಿಕಾದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಅಡಚಣೆ ದಾಟಿ ಒಂದು ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ವೈರಸ್ ಲಸಿಕೆಯ ಮೊದಲ ಎರಡು ಡೋಸ್ ಗಳನ್ನು ಪಡೆದುಕೊಂಡಿದ್ದಾರೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ನಿರ್ದೇಶಕ ರಾಬರ್ಟ್ ರೆಡ್ಫೀಲ್ಡ್ ಹೇಳಿದ್ದಾರೆ.

ವಾಷಿಂಗ್ಟನ್: ಅಮೆರಿಕಾದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಅಡಚಣೆ ದಾಟಿ ಒಂದು ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ವೈರಸ್ ಲಸಿಕೆಯ ಮೊದಲ ಎರಡು ಡೋಸ್ ಗಳನ್ನು ಪಡೆದುಕೊಂಡಿದ್ದಾರೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ನಿರ್ದೇಶಕ ರಾಬರ್ಟ್ ರೆಡ್ಫೀಲ್ಡ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಅಮೆರಿಕಾ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ - ಹತ್ತು ದಿನಗಳ ಹಿಂದೆ ಪ್ರಾರಂಭವಾದ ಲಸಿಕೆ ಕಾರ್ಯಕ್ರಮದಲ್ಲಿ 1 ದಶ ಲಕ್ಷಕ್ಕೂ ಹೆಚ್ಚು ಮಂದಿ ಮೊದಲ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ರೆಡ್ಫೀಲ್ಡ್ ಬುಧವಾರ ಹೇಳಿದ್ದಾರೆ.
ಎಲ್ಲರಿಗೂ ಲಸಿಕೆ ಲಭ್ಯವಾಗುವವರೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ರೆಡ್ಫೀಲ್ಡ್ ಅಮೆರಿಕನ್ನರನ್ನು ಒತ್ತಾಯಿಸಿದ್ದಾರೆ. ಈ ವಾರದ ಅಂತ್ಯದ ವೇಳೆಗೆ, ಅಮೆರಿಕಾ ಅಧಿಕಾರಿಗಳು ಎರಡು ಅನುಮೋದಿತ ಲಸಿಕೆಗಳ ಸುಮಾರು 10 ದಶಲಕ್ಷ ಡೋಸ್ಗಳನ್ನು ವಿತರಿಸಿದ್ದಾರೆ, ಸರ್ಕಾರದ ಕೋರಿಕೆಯಂತೆ ಲಸಿಕೆ ಅಭಿವೃದ್ದಿ ಸಂಸ್ಥೆಗಳಾದ ಫೈಝರ್ , ಬಯೋಟೆಕ್ ಮತ್ತು ಮಾಡರ್ನಾ ಲಕ್ಷಾಂತರ ಪ್ರಮಾಣದಲ್ಲಿ ಲಸಿಕೆಗಳನ್ನು ಪೂರೈಸಲಿವೆ. ಪ್ರತಿ ಲಸಿಕೆಯನ್ನು ಎರಡು ಹಂತಗಳಲ್ಲಿ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


