ಪಾಕಿಸ್ತಾನ: ಹಫೀಜ್ ಸಯೀದ್ಗೆ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ
ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಲಾಹೋರ್: ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 15 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
70 ವರ್ಷದ ಹಫೀಜ್ ಸಯೀದ್ಗೆ ಈಗಾಗಲೇ ನಾಲ್ಕು ಪ್ರಕರಣಗಳಲ್ಲಿ ಕೋರ್ಟ್ 21 ವರ್ಷ ಜೈಲು ಶಿಕ್ಷೆ ನೀಡಿದೆ. ಈಗ ಮತ್ತೆ 15 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಒಟ್ಟು ಐದು ಪ್ರಕರಣಗಳಲ್ಲಿ 36 ವರ್ಷ ಜೈಲು ಶಿಕ್ಷೆಯಾಗಿದೆ.
ಸದ್ಯ ಲಾಹೋರ್ ಜೈಲಿನಲ್ಲಿರುವ ಹಫೀಜ್ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 25 ಪ್ರಕರಣಗಳು ಈಗಾಗಲೇ ಇತ್ಯರ್ಥಗೊಂಡಿವೆ. ಇನ್ನು ಉಳದಿ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಶೀಘ್ರವೇ ತೀರ್ಪು ಹೊರ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


