ಕ್ಯಾಲಿಫೋರ್ನಿಯಾದಲ್ಲಿ ಹೆಚ್ಚಿದ ಕೊರೋನ ಸೋಂಕು: 3 ವಾರ ಮನೆ ವಾಸ ಕಡ್ಡಾಯ
ಕ್ಯಾಲಿಫೋರ್ನಿಯಾದಲ್ಲಿ ಕೆಲ ವಲಯದಲ್ಲಿ ಕರೋನ ಸೋಂಕು ಪ್ರಕರಣಗಳು ಬಹಳ ವೇಗವಾಗಿ ಹೆಚ್ಚಾದ ಕಾರಣ ಜನತೆ ಮೂರು ವಾರ ಮನೆಯಲ್ಲಿಯೇ ಇರುವಂತೆ ಹೊಸ ಆದೇಶ ವಿಸ್ತರಿಲಾಗುತ್ತಿದೆ ಎಂದು ಕ್ಯಾಲಿಫೋರ್ನಿಯಾ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಾಷಿಂಗ್ಟನ್: ಕ್ಯಾಲಿಫೋರ್ನಿಯಾದಲ್ಲಿ ಕೆಲ ವಲಯದಲ್ಲಿ ಕರೋನ ಸೋಂಕು ಪ್ರಕರಣಗಳು ಬಹಳ ವೇಗವಾಗಿ ಹೆಚ್ಚಾದ ಕಾರಣ ಜನತೆ ಮೂರು ವಾರ ಮನೆಯಲ್ಲಿಯೇ ಇರುವಂತೆ ಹೊಸ ಆದೇಶ ವಿಸ್ತರಿಲಾಗುತ್ತಿದೆ ಎಂದು ಕ್ಯಾಲಿಫೋರ್ನಿಯಾ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
"ಸ್ಯಾನ್ ಜೊವಾಕ್ವಿನ್ ವ್ಯಾಲಿ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಮನೆ ವಾಸದ ವಾಸ್ತವ್ಯದ ಆದೇಶಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಕ್ಯಾಲಿಫೋರ್ನಿಯಾ ಸಾರ್ವಜನಿಕ ಆರೋಗ್ಯ ಇಲಾಖೆ ಟ್ವಿಟರ್ ಮೂಲಕ ತಿಳಿಸಿದೆ.
ಡಿಮೆ ಜನರೊಂದಿಗೆ ಕಡಿಮೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ, ನೀವು ಮನೆಯಿಂದ ಹೊರಡುವ ಯಾವುದೇ ಸಮಯದಲ್ಲಿ ಮುಖವಾಡಗಳನ್ನು ಇಟ್ಟುಕೊಳ್ಳುವ ಮೂಲಕ ಮತ್ತು ಮನೆಯಲ್ಲಿಯೇ ಇರುವ ಮೂಲಕ ಪರಸ್ಪರರನ್ನು ರಕ್ಷಿಸಲು ಈ ಕ್ರಮ ಅನಿವಾರ್ಯವಾಗಿದೆ.
ನಿರ್ಬಂಧಿತ ಪ್ರದೇಶಗಳಲ್ಲಿ ಬಾರ್‌ಗಳು, ವೈಯಕ್ತಿಕ ಸೇವೆಗಳು, ಹೇರ್ ಸಲೂನ್‌ಗಳನ್ನು ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಕಳೆದ ಏಳು ದಿನಗಳಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಪ್ರಕರಣ ವರದಿಯಾಗಿರುವುದು ಬಹಳ ಆತಂಕ ತಂದಿದೆ ಎಂದೂ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


