ಕೊರೋನಾವೈರಸ್: 20,000 ರೋಗಿಗಳ ಹತ್ಯೆಗೆ ಚೀನಾ ಯತ್ನ?
ಕೊರೋನಾ ವ್ಯಾಪಕವಾಗಿ ಹಬ್ಬುವುದನ್ನು ತಡೆಯಲು 20000 ರೋಗಿಗಳನ್ನು ಕೊಲ್ಲಲು ಚೀನಾ ಸರ್ಕಾರ ಯೋಜಿಸಿದೆ ಎಂದು ವರದಿಗಳು ತಿಳಿಸಿವೆ.

ಬೀಜಿಂಗ್: ಕೊರೋನಾ ವ್ಯಾಪಕವಾಗಿ ಹಬ್ಬುವುದನ್ನು ತಡೆಯಲು 20000 ರೋಗಿಗಳನ್ನು ಕೊಲ್ಲಲು ಚೀನಾ ಸರ್ಕಾರ ಯೋಜಿಸಿದೆ ಎಂದು ವರದಿಗಳು ತಿಳಿಸಿವೆ.
ಸೋಂಕು ತಗುಲಿದ ರೋಗಿಗಳನ್ನು ಹತ್ಯೆ ಮಾಡಲು ಚೀನಾ ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೋಗಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಆದರೆ, ಈ ಸುದ್ದಿಯನ್ನು ಚೀನಾ ಹಾಗೂ ಇತರೆ ಯಾವುದೇ ಪ್ರಮುಖ ವಾಹಿನಿಗಳು ಪ್ರಸಾರ ಮಾಡಿಲ್ಲ.
ಈ ನಡುವೆ ಕೊರೋನಾ ವೈರಸ್ ಸೋಂಕು ಭಾರೀ ಪ್ರಮಾಣದಲ್ಲಿ ಹಬ್ಬುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಚೀನಾ ಸರ್ಕಾರ, ಯಾವುದೇ ವ್ಯಕ್ತಿ ತನಗೆ ಸೋಂಕು ತಗುಲಿರುವ ಮಾಹಿತಿಯನ್ನು ಮುಚ್ಚಿಟ್ಟರೆ, ಉದ್ದೇಶ ಪೂರ್ವಕವಾಗಿ ತಮ್ಮ ಕಾಯಿಲೆಯನ್ನು ಮುಚ್ಚಿಟ್ಟು ಸಾರ್ವಜನಿಕ ಸ್ಥಳಗಳಿಗೆ ಬಂದು, ಇತರರಿಗೆ ಹಬ್ಬಿಸಲು ಯತ್ನಿಸಿದರೆ ಅಂತಹವರ ವಿರುದ್ಧ ಮರಣದಂಡನೆ ಸೇರಿದಂತೆ ಇನ್ನಿತರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


