ವಿದೇಶ

ಕೊರೋನಾ ವೈರಸ್: ನಿಷೇಧ ತೆರವುಗೊಳಿಸಿ ಚೀನಾಗೆ ವೈದ್ಯಕೀಯ ನೆರವು ನೀಡಲು ಮುಂದಾದ ಭಾರತ

ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ನಿಂದ ಇದುವರೆಗೆ 910 ಮಂದಿ ಮೃತಪಟ್ಟಿದ್ದು, ಸೋಂಕಿಗೆ ಒಳಗಾದವರ ಸಂಖ್ಯೆ 40,171 ಕ್ಕೆ ತಲುಪಿದೆ.

ಕೊರೋನಾ ವೈರಸ್: ನಿಷೇಧ ತೆರವುಗೊಳಿಸಿ ಚೀನಾಗೆ ವೈದ್ಯಕೀಯ ನೆರವು ನೀಡಲು ಮುಂದಾದ ಭಾರತ
ಸಾಂದರ್ಭಿಕ ಚಿತ್ರ
Published On :

ಬೀಜಿಂಗ್: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ನಿಂದ ಇದುವರೆಗೆ 910 ಮಂದಿ ಮೃತಪಟ್ಟಿದ್ದು, ಸೋಂಕಿಗೆ ಒಳಗಾದವರ ಸಂಖ್ಯೆ 40,171 ಕ್ಕೆ ತಲುಪಿದೆ. 

ಈ ಮಧ್ಯೆ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಚೀನಾಗೆ ವೈದ್ಯಕೀಯ ನೆರವು ನೀಡಲು ಭಾರತ ಮುಂದಾಗಿದ್ದು, ಕೆಲವು ವೈಯಕ್ತಿಕ ಸುರಕ್ಷತಾ ಸಾಧನಗಳ ಮೇಲಿನ ರಫ್ತು ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಚೀನಾದಲ್ಲಿರುವ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ಪತ್ರ ಬರೆದು ಕೊರೋನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ಭರವಸೆ ನೀಡಿದ ಮಾರನೇ ದಿನವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೆಲವು ರಕ್ಷಣಾತ್ಮಕ ಉಡುಪು ಮತ್ತು ಮುಖವಾಡಗಳಂತಹ ವೈಯಕ್ತಿಕ ಸುರಕ್ಷತಾ ಸಾಧನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲಾಗಿದ್ದು, ಇವುಗಳನ್ನು ಚೀನಾಗೆ ರಫ್ತು ಮಾಡಬಹುದು ಎಂದು ಮಿಸ್ರಿ ಅವರು ತಿಳಿಸಿದ್ದಾರೆ.

ನಿನ್ನೆ ಚೀನಾ ಅಧ್ಯಕ್ಷರಿಗೆ ಪತ್ರ ಬರೆದಿದ್ದ ಪ್ರಧಾನಿ ಮೋದಿ, ಚೀನಾದಲ್ಲಿ ಈಗ ಎದುರಾಗಿರುವ ಪರಿಸ್ಥಿತಿಯನ್ನು ಎದುರಿಸಲು ಭಾರತ ನೆರವು ನೀಡುತ್ತದೆ. ಏಕಾಏಕಿ ಸಂಭವಿಸಿದ ಕೊರೋನಾ ವೈರಸ್‍ನ ದುರದೃಷ್ಟಕರ ಎಂದು ಸಂತಾಪ ಸೂಚಿಸಿದ್ದರು. ಇದರೊಂದಿಗೆ ಕೊರೊನಾ ವೈರಸ್‍ನ ತೀವ್ರ ಹೊಡೆತಕ್ಕೆ ಸಿಲುಕಿರುವ ಹುಬೆ ಪ್ರಾಂತ್ಯದಿಂದ ಈ ತಿಂಗಳ ಆರಂಭದಲ್ಲಿ ಭಾರತೀಯರನ್ನು ಸ್ಥಳಾಂತರಿಸಲು ನೆರವು ನೀಡಿದ ಚೀನಾ ಸರ್ಕಾರದ ಕಾರ್ಯಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ಜನವರಿ 31ರಂದು ಭಾರತ ಉಡುಪು ಮತ್ತು ಮಾಸ್ಕ್ ಸೇರಿದಂತೆ ಎಲ್ಲಾ ರೀತಿಯ ವೈಯಕ್ತಿಕ ಸುರಕ್ಷತಾ ಸಾಧನಗಳ ರಫ್ತು ಅನ್ನು ನಿಷೇಧಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.