ಕರಾಚಿ ಬಂದರಿನಲ್ಲಿ ನಿಗೂಢ ವಿಷಾನಿಲ ಸೋರಿಕೆ, ಕನಿಷ್ಠ 14 ಸಾವು
ಪಾಕಿಸ್ತಾನದ ಬಂದರು ನಗರಿ ಕರಾಚಿಯಲ್ಲಿ ನಿಗೂಢ ವಿಷಾನಿಲ ಸೋರಿಕೆ ಪರಿಣಾಮ ಕನಿಷ್ಠ 14 ಜನ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.

ಕರಾಚಿ: ಪಾಕಿಸ್ತಾನದ ಬಂದರು ನಗರಿ ಕರಾಚಿಯಲ್ಲಿ ನಿಗೂಢ ವಿಷಾನಿಲ ಸೋರಿಕೆ ಪರಿಣಾಮ ಕನಿಷ್ಠ 14 ಜನ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.
ಕರಾಚಿಯ ಕೇಮಾರಿ ಬಂದರು ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ14 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ 25ಕ್ಕೂ ಅಧಿಕ ಮಂದಿಯಲ್ಲಿ ಗಂಭೀರ ಉಸಿರಾಟದ ಸಮಸ್ಯೆ ಅರಂಭವಾಗಿದ್ದು, ಎಲ್ಲರನ್ನೂ ಸಮೀಪದ ಜಿಯಾವುದ್ದೀನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತಂತೆ ಆಸ್ಪತ್ರೆ ವಕ್ತಾರ ಆಮೀರ್ ಶೆಹಜಾದ್ ಹೇಳಿಕೆ ಬಿಡುಗಡೆ ಮಾಡಿದ್ದು, ಕಳೆದ ಎರಡು ದಿನಗಳ ಅವಧಿಯಲ್ಲಿ ಆಸ್ಪತ್ರೆ ದಾಖಲಾದವರ ಪೈಕಿ 9 ಜನ ಸಾವನ್ನಪ್ಪಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕೌಟಿನ್ಯ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಇಬ್ಬರು ಮೃತಪಟ್ಟಿದ್ದು, ಮಂಗಳವಾರ ಇನ್ನೂ ಮೂವರು ಮೃತ ಪಟ್ಟಿದ್ದು ಮೃತರ ಸಂಖ್ಯೆ 14ಕ್ಕೇರಿದೆ.
ಇದೇ ವಿಚಾರವಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕರಾಚಿ ಪೊಲೀಸ್ ಮುಖ್ಯಸ್ಥ ಗುಲಾಂ ನಬಿ ಮೆಮೋನ್ ಅವರು, ಈ ವಿಷಾನಿಲ ಹರಡುವುದಕ್ಕೆ ಕಾರಣವಾಗಿದ್ದೇನು ಎಂಬ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ತನಿಖೆ ಮುಂದುವರಿದಿದ್ದು, ಜನರು ಅಸ್ವಸ್ಥರಾಗುವುದಕ್ಕೆ ಸರಿಯಾದ ಕಾರಣವನ್ನು ಪತ್ತೆಹಚ್ಚಲು ವೈದ್ಯರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


