ಇಟಲಿಗೂ ವ್ಯಾಪಿಸಿದ ಕೊರೊನಾ ವೈರಸ್ ಮಾರಿ, 400ಕ್ಕೆ ಏರಿದ ಸೋಂಕು ಪ್ರಕರಣಗಳ ಸಂಖ್ಯೆ
ಚೀನಾ, ಕೊರಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಭೀತಿ ಸೃಷ್ಟಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಮಾರಿ ಇದೀಗ ಹಲವಾರು ಯುರೋಪಿಯನ್ ರಾಷ್ಟ್ರಗಳಿಗೂ ವ್ಯಾಪಿಸಿದೆ.

ರೋಮ್: ಚೀನಾ, ಕೊರಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಭೀತಿ ಸೃಷ್ಟಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಮಾರಿ ಇದೀಗ ಹಲವಾರು ಯುರೋಪಿಯನ್ ರಾಷ್ಟ್ರಗಳಿಗೂ ವ್ಯಾಪಿಸಿದೆ.
ಮೂಲಗಳ ಪ್ರಕಾರ ಇಟಲಿಯಲ್ಲೂ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಬುಧವಾರದ ಹೊತ್ತಿಗೆ ಇಟಲಿಯಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ 400ಕ್ಕೇರಿದೆ ಎಂದು ತಿಳಿದುಬಂದಿದೆ.
ಯುರೋಪಿನ ಸೋಂಕಿನ ಮುಖ್ಯ ಕೇಂದ್ರವಾದ ಇಟಲಿಯಲ್ಲಿ ಕಳದೆ 24 ಗಂಟೆಗಳಲ್ಲಿ 25 ಪ್ರತಿಶತದಷ್ಟು ಸೋಂಕು ಹೆಚ್ಚಳವಾಗಿದೆ ಎಂದೂ ಬಿಬಿಸಿ ಸುದ್ದಿ ವರದಿ ತಿಳಿಸಿದೆ. ಆದರೂ ಜಾಗತಿಕವಾಗಿ ಹೆಚ್ಚಿನ ಪ್ರಕರಣಗಳು ಚೀನಾದಲ್ಲೆ ವರದಿಯಾಗುತ್ತಿದೆ.
ಇನ್ನು ಚೀನಾ, ದಕ್ಷಿಣ ಕೊರಿಯಾ ಮಾತ್ರವಲ್ಲದೇ ವಿಶ್ವಾದ್ಯಂತ ಸುಮಾರು 40 ದೇಶಗಳಲ್ಲಿ ಕೊರೋನಾ ವೈರಸ್ ವ್ಯಾಪಿಸಿದ್ದು, ಸುಮಾರು 80 ಸಾವಿರ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಚೀನಾವೊಂದರಲ್ಲೇ ಸೋಂಕಿತರ ಸಂಖ್ಯೆ 78,497ರಷ್ಟಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


