ಹೊಸ ವರ್ಷಾಚರಣೆ ವೇಳೆ ಅವಘಡ: ಬೆಂಕಿ ಹೊತ್ತಿ ಮೃಗಾಲಯದಲ್ಲಿ 30 ಪ್ರಾಣಿಗಳು ಸಜೀವ ದಹನ
ಹೊಸ ವರ್ಷದ ಸಂಭ್ರಮಕ್ಕಾಗಿ ಅಳವಡಿಸಿದ್ದ ವಿದ್ಯುತ್ ದೀಪದ ಬೆಳಕು ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಂಗಗಳು ಸೇರಿದಂತೆ ಹಲವು ಪ್ರಾಣಿಗಳು ಜೀವಂತವಾಗಿ ಸುಟ್ಟು ಕರಕಲಾಗಿರುವ ಬೀಭತ್ಸ ಘಟನೆ ಜರ್ಮನಿಯ ಪ್ರಾಣಿಸಂಗ್ರಹಾಲಯದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಬರ್ಲಿನ್: ಹೊಸ ವರ್ಷದ ಸಂಭ್ರಮಕ್ಕಾಗಿ ಅಳವಡಿಸಿದ್ದ ವಿದ್ಯುತ್ ದೀಪದ ಬೆಳಕು ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಂಗಗಳು ಸೇರಿದಂತೆ ಹಲವು ಪ್ರಾಣಿಗಳು ಜೀವಂತವಾಗಿ ಸುಟ್ಟು ಕರಕಲಾಗಿರುವ ಬೀಭತ್ಸ ಘಟನೆ ಜರ್ಮನಿಯ ಪ್ರಾಣಿಸಂಗ್ರಹಾಲಯದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡಿದ್ದರಿಂದ ಝೂನಲ್ಲಿದ್ದ ಸುಮಾರು 30ಕ್ಕೂ ಅಧಿಕ ಮಂಗಗಳು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಣಿಸಂಗ್ರಹಾಲಯದಲ್ಲಿ ಗೊರಿಲ್ಲಾ, ದೊಡ್ಡ ಜಾತಿಯ ಮಂಗಗಳು, ಜಿಂಪಾಂಚಿಗಳು ಹಾಗೂ ಹೊಸ ತಳಿಯ ಮಂಗಗಳಿದ್ದವು. ಕೇವಲ ಎರಡು ಜಿಂಪಾಂಚಿಗಳು ಬದುಕಿದ್ದು, ಗೊರಿಲ್ಲಾಗಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು ಎಂದು ವರದಿ ವಿವರಿಸಿದೆ.
ಪೇಪರ್ ನಿಂದ ತಯಾರಿಸಿದ್ದ ಗೂಡು ದೀಪಗಳು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಗಾಳಿಗೆ ಎಲ್ಲೆಡೆ ಹರಡಿತ್ತು ಎಂದು ಪ್ರಾಥಮಿಕ ವರದಿ ತಿಳಿಸಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


