ವಿದೇಶ

ನಮ್ಮ ಮೇಲೆ ದಾಳಿ ನಡೆಸಿದರೆ ಇರಾನ್ ರಾಷ್ಟ್ರದ 52 ತಾಣಗಳು ಕ್ಷಣಾರ್ಧದಲ್ಲಿ ಧ್ವಂಸ: ಟ್ರಂಪ್ ಎಚ್ಚರಿಕೆ 

ನಮ್ಮ ಮೇಲೆ ಪ್ರತಿ ದಾಳಿ ನಡೆಸಿದ್ದೇ ಆದರೆ, ಇರಾನ್ ರಾಷ್ಟ್ರದ 52 ತಾಣಗಳು ಹಾಗೂ ಸಾಂಸ್ಕೃತಿಕ ಪ್ರದೇಶಗಳು ಕ್ಷಣಾರ್ಧದಲ್ಲಿ ಧ್ವಂಸಗೊಳ್ಳುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಪ್ರತಿದಾಳಿಗೆ ಸಂಚು ರೂಪಿಸುತ್ತಿರುವ ಇರಾನ್ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಮೇಲೆ ದಾಳಿ ನಡೆಸಿದರೆ ಇರಾನ್ ರಾಷ್ಟ್ರದ 52 ತಾಣಗಳು ಕ್ಷಣಾರ್ಧದಲ್ಲಿ ಧ್ವಂಸ: ಟ್ರಂಪ್ ಎಚ್ಚರಿಕೆ 
ಸಂಗ್ರಹ ಚಿತ್ರ
Published On :

ವಾಷಿಂಗ್ಟನ್: ನಮ್ಮ ಮೇಲೆ ಪ್ರತಿ ದಾಳಿ ನಡೆಸಿದ್ದೇ ಆದರೆ, ಇರಾನ್ ರಾಷ್ಟ್ರದ 52 ತಾಣಗಳು ಹಾಗೂ ಸಾಂಸ್ಕೃತಿಕ ಪ್ರದೇಶಗಳು ಕ್ಷಣಾರ್ಧದಲ್ಲಿ ಧ್ವಂಸಗೊಳ್ಳುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಪ್ರತಿದಾಳಿಗೆ ಸಂಚು ರೂಪಿಸುತ್ತಿರುವ ಇರಾನ್ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಈ ಹಿಂದೆ ಇರಾನ್ ರಕ್ಷಣಾ ಪಡೆಯ ದಂಡನಾಯಕ ಖಾಸಿಂ ಸುಲೈಮಾನಿಯನ್ನು ಅಮೆರಿಕಾವು ಡ್ರೋನ್ ದಾಳಿ ನಡೆಸಿ, ಇರಾಕ್ ನಲ್ಲಿ ಹತ್ಯೆ ಮಾಡಿತ್ತು. ಬಳಿಕ ಅಮೆರಿಕಾದ ಮೇಲೆ ಕಠೋರ ಪ್ರತೀಕಾರ ತೀರಿಸಿಕೊಳ್ಳುವ ಬೆದರಿಕೆಯನ್ನು ಇರಾನ್ ಹಾಕಿತ್ತು. 

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಡೊನಾಲ್ಡ್ ಟ್ರಂಪ್ ಅವರು, ಸೇನಾ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ. 

ಅಲ್ಲದೆ, ನಮ್ಮ ಮೇಲೆ ಪ್ರತಿ ದಾಳಿ ನಡೆಸಿದ್ದೇ ಆದರೆ, ಇರಾನ್ ರಾಷ್ಟ್ರದ ಪ್ರಮುಧ ಪ್ರದೇಶಗಳು, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಪ್ರದೇಶ ಸೇರಿದಂತೆ 52 ಪ್ರಮುಖ ತಾಣಗಳ ಮೇಲೆ ದಾಳಿ ನಡೆಸಿ, ಕ್ಷಣಾರ್ಧದಲ್ಲಿ ಧ್ವಂಸಗೊಳಿಸಲಾಗುತ್ತದೆ. ನಂತರ ಅಮೆರಿಕಾ ರಾಷ್ಟ್ರಕ್ಕೆ ಯಾವುದೇ ಸಮಸ್ಯೆಗಳೂ ಇರುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.