ಸಾವು ಹೀಗೂ ಬರಬಹುದು: ಘಟನೆಯ ವಿವರ ಏನು ಅಂತಂದ್ರೆ...
ಆಸ್ಟ್ರೇಲಿಯಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕೇಕ್ ತಿನ್ನುವ ಸ್ಪರ್ಧೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಸಿಡ್ನಿ: ಆಸ್ಟ್ರೇಲಿಯಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕೇಕ್ ತಿನ್ನುವ ಸ್ಪರ್ಧೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಮಾಧ್ಯಮದ ವರದಿಗಳ ಪ್ರಕಾರ 60 ವರ್ಷದ ಲ್ಯಾಮಿಂಗ್ ಟನ್ ನ್ನು ನುಂಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಈ ಘಟನೆ ವರದಿಯಾಗಿದೆ. ಲ್ಯಾಮಿಂಗ್ ಟನ್ ಆಸ್ಟ್ರೇಲಿಯಾದ ಸಾಂಪ್ರದಾಯಿಕ ಸಿಹಿ ತಿನಿಸಾಗಿದ್ದು, ಕೇಕ್ ನ್ನು ಚಾಕೊಲೇಟ್ ತುರಿದ ತೆಂಗಿನಕಾಯಿ ಜೊತೆ ತಯಾರಿಸಲಾಗಿರುತ್ತದೆ.
ಈ ಸಿಹಿ ತಿನಿಸನ್ನು ಇಡಿಯಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಮಹಿಳೆಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಆ ವೇಳೆಗೆ ಆಗಲೇ ಮಹಿಳೆ ಸಾವನ್ನಪ್ಪಿದ್ದರು. ಬೀಚ್ ಹೌಸ್ ಹೊಟೆಲ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಈ ಮಹಿಳೆ ಭಾಗವಹಿಸಿದ್ದರು. ಸ್ಪರ್ಧೆ ಆಯೋಜಿಸಿದ್ದ ಮ್ಯಾನೇಜ್ಮೆಂಟ್ ಈ ದುರ್ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


