ವಿದೇಶ

ಚೀನಾದಲ್ಲಿ ವ್ಯಾಪಕಗೊಂಡ ಕೊರೋನಾ ವೈರಸ್: ಸಾವಿನ ಸಂಖ್ಯೆ 106ಕ್ಕೆ ಏರಿಕೆ, 1,300 ಮಂದಿಯಲ್ಲಿ ಸೋಂಕು ಪತ್ತೆ

ಚೀನಾದಲ್ಲಿ ತನ್ನ ಮೃದಂಗವನ್ನು ಮುಂದುವರೆಸಿರುವ ಮಾರಕ ಕೊರೋನಾ ವೈರಸ್ 106 ಮಂದಿಯನ್ನು ಬಲಿಪಡೆದುಕೊಂಡಿದ್ದು, ಮತ್ತೆ 1,300 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಚೀನಾದಲ್ಲಿ ವ್ಯಾಪಕಗೊಂಡ ಕೊರೋನಾ ವೈರಸ್: ಸಾವಿನ ಸಂಖ್ಯೆ 106ಕ್ಕೆ ಏರಿಕೆ, 1,300 ಮಂದಿಯಲ್ಲಿ ಸೋಂಕು ಪತ್ತೆ
ಸಂಗ್ರಹ ಚಿತ್ರ
Published On :

ವುಹಾನ್: ಚೀನಾದಲ್ಲಿ ತನ್ನ ಮೃದಂಗವನ್ನು ಮುಂದುವರೆಸಿರುವ ಮಾರಕ ಕೊರೋನಾ ವೈರಸ್ 106 ಮಂದಿಯನ್ನು ಬಲಿಪಡೆದುಕೊಂಡಿದ್ದು, ಮತ್ತೆ 1,300 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೊರೋನಾ ವೈರಸ್ ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಕಳೆದೆರಡು ದಿನಗಳಲ್ಲಿ 24 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ಇದೀಗ ಮತ್ತೆ ಹೊಸದಾಗಿ 1,300 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ವರೆಗೆ 2,744 ಮಂದಿಗೆ ಸೋಂಕು ತಗುಲಿರುವುದಾಗಿ ವರದಿಗಳು ತಿಳಿಸಿವೆ. ಈ ಪೈಕಿ 461 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. 

ಈ ಮಧ್ಯೆ ಕೊರೋನಾ ವೈರಸ್ ನಿಯಂತ್ರಣಕ್ಕೆ ಹರ ಸಾಹಸ ಪಡುತ್ತಿರುವ ಚೀನಾ ಸರ್ಕಾರ, ಪ್ರಧಾನಿ ಲಿ ಕೆಖಿಯಾಂಗ್ ನೇತೃತ್ವದಲ್ಲಿ ಉನ್ನತ ಸಮಿತಿಯೊಂದನ್ನು ರಚಿಸಿದೆ. ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ವುಹಾನ್ ನಗರಕ್ಕೆ ಭೇಟಿ ನೀಡಿರುವ ಪ್ರಧಾನಿ ಕೆಖಿಯಾಂಗ್ ಅವಲೋಕನ ನಡೆಸಿದ್ದಾರೆ. 

ಕೊರೋನಾ ವೈರಸ್ ಸೋಂಕು ಭಾರತಕ್ಕೂ ಕಾಲಿಡುವ ಭೀತಿ ಹಿನ್ನೆಲಯಲ್ಲಿ ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ. ಬೆಂಗಳೂರು ಸೇರಿ ದೇಶದ ವಿವಿಧೆಡೆ ಚೀನಾದಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 

ಬಿಹಾರ, ಮುಂಬೈನಲ್ಲಿ ತಲಾ ಒಬ್ಬರು ಮತ್ತು ಹೈದರಾಬಾದ್ ನಲ್ಲಿ ಹೊಸದಾಗಿ ನಾಲ್ವರು ರೋಗಿಗಳಿಗೆ ಸೋಂಕು ತಗುಲಿರುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪ್ರತ್ಯೇಕ ಕೋಣೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೇರಳದಲ್ಲಿ ಇತ್ತೀಚೆಗೆ ಚೀನಾದಿದ ಮರಳಿದ 436 ಮಂದಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದ್ದು, ಸೋಂಕು ಪತ್ತೆಯಾಗಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.